ಇತ್ತೀಚಿನ ಸುದ್ದಿ
ಕರಾವಳಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಟೆಂಪಲ್ ರನ್: ಧರ್ಮಸ್ಥಳ, ಸೌತಡ್ಕ ಕ್ಷೇತ್ರಕ್ಕೆ ಭೇಟಿ; ವಿಶೇಷ ಪೂಜೆ ಸಲ್ಲಿಕೆ
24/06/2024, 12:15
ಮಂಗಳೂರು(reporterkarnataka.com): ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಕರಾವಳಿಯಲ್ಲಿ ಜಿಟಿ ಜಿಟಿ ಮಳೆಯ ಮಧ್ಯೆ ಟೆಂಪಲ್ ರನ್ ನಡೆಸಿದರು.
ಯಡಿಯೂರಪ್ಪ ಅವರು ಸೋಮವಾರ ಬೆಳಗ್ಗೆ ಶ್ರೀ ಧರ್ಮಸ್ಥಳ ಮಂಜನಾಥ ದೇವಾಲಯಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆ ಉಪಸ್ಥಿತರಿದ್ದರು. ಬಳಿಕ ಯಡಿಯೂರಪ್ಪ ಅವರನ್ನು ವೀರೇಂದ್ರ ಹೆಗಡೆ ಗೌರವಿಸಿದರು. ನಂತರ ಯಡಿಯೂರಪ್ಪ ಅವರು ಕೊಕ್ಕಡ ಸಮೀಪದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಅಲ್ಲಿಯೂ ಮಾಜಿ ಮುಖ್ಯಮಂತ್ರಿಯವರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಕಣಿಯೂರು ಸಮೀಪ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲೂ ಪಾಲ್ಗೊಂಡರು