ಇತ್ತೀಚಿನ ಸುದ್ದಿ
ಕರಾವಳಿ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ: ಫೀಸಿಗಾಗಿ ಪೀಡಿಸಲಾಗಿತ್ತೇ ಅಮಾಯಕನ?
17/03/2022, 11:42

ಮಂಗಳೂರು(reporterkarnataka.com): ಮಂಗಳೂರಿನ ಕರಾವಳಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರು ನೀಡುತ್ತಿದ್ದ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕುಮಾರಸ್ವಾಮಿ ಬಡಾವಣೆಯ ನಿವಾಸಿ ಭರತ್ (20) ಎಂಬಾತ ಮಂಗಳೂರಿನ ಕರಾವಳಿ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್‌ಮೆಂಟ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪಿಜಿಯಲ್ಲಿ ವಾಸ್ತವ್ಯ ಹೊಂದಿದ್ದ ಭರತ್ ಪಿಜಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭರತ್ ಆತ್ಮಹತ್ಯೆಗೆ ಮುನ್ನ ತಾಯಿಗೆ ಕರೆ ಮಾಡಿದ್ದಾನೆ. ದುರದೃಷ್ಟವಶಾತ್ ಆ ವೇಳೆ ಕರೆ ಸ್ವೀಕರಿಸಲು ತಾಯಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದುಬಂದಿದೆ. ಈ ನಡುವೆ ಭರತ್, ಕಾಲೇಜಿನ ಪ್ರಾಧ್ಯಾಪಕರೊಬ್ಬರು ತಾನು ಮಾಡಿದ ಪ್ರಾಜೆಕ್ಟ್ ವರ್ಕ್ ಸರಿ ಇಲ್ಲ ಎಂದು ಸಹಿ ಮಾಡಿಲ್ಲ. ಪರೀಕ್ಷೆಗೆ ಕುಳಿತುಕೊಳ್ಳಲು ಕೂಡ ನಿರಾಕರಿಸಿದ್ದಾರೆ ಎಂದು ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೇಜಿನ ಅಧ್ಯಕ್ಷರ ಹೆಸರನ್ನು ಕೂಡ ಉಲ್ಲೇಖಿಸಿದ್ದಾನೆ ಎನ್ನಲಾಗಿದೆ.
ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.