1:07 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕರಾವಳಿ: ಇಂದಿನಿಂದ 5 ದಿನಗಳ ಕಾಲ ಹೈ ವೇವ್ ಅಲರ್ಟ್; ಸಮುದ್ರ ತೀರಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

14/06/2023, 19:39

ಮಂಗಳೂರು(reporterkarnataka.com): ಭಾರತೀಯ ಹವಾಮಾನ ಇಲಾಖೆ ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ 42 ಕಿ.ಮೀ ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಇತ್ತೀಚಿಗೆ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್ ಜಾಯ್’ ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ. ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4ಮೀ. ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ ಅಂದರೆ, ಜೂ.19ರ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೆವೆಗೆ 24/7 ಕಂಟ್ರೋಲ್ ರೂಂ. ಟೋಲ್ ಫ್ರೀ ಸಂಖ್ಯೆ:1077/0824-2442590 ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು