7:01 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಕರಾವಳಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಆಡಳಿತ ಮಂಡಳಿ ವಿರುದ್ದ ಸೂಕ್ತ ಕ್ರಮಕ್ಕೆ  ಎಸ್ಎಫ್ಐ ಒತ್ತಾಯ

19/03/2022, 11:24

ಮಂಗಳೂರು(reporterkarnataka.com): ನಗರದ ಕರಾವಳಿ ಕಾಲೇಜು ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ನ ವಿದ್ಯಾರ್ಥಿ ಭರತ್ ಭಾಸ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು  ಭಾರತ ವಿದ್ಯಾರ್ಥಿ ಫೆಡರೇಶನ್( SFI) ದ.ಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕಾಲೇಜು ಸಮಸ್ಯೆಗಳಿಂದ ಮನನೊಂದು ತನ್ನ ಸಾವಿಗೆ ಕಾಲೇಜಿನ ಅವ್ಯವಸ್ಥೆಯೇ ಕಾರಣವೆಂದು ಪತ್ರ ಬರೆದು ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಹಾಗೂ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು  ಭಾರತ ವಿದ್ಯಾರ್ಥಿ ಫೆಡರೇಶನ್ ಜಿಲ್ಲಾಧಿಕಾರಿ ಮತ್ತು ಮಂಗಳೂರು ನಗರ ಪೋಲೀಸ್ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿ ಒತ್ತಾಯಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯು ಒಂದು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಇಲ್ಲಿಗೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದಲೂ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಹೆಚ್ಚಿನ  ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿನ ಬಹುತೇಕ ಖಾಸಗೀ ಶಿಕ್ಷಣ ಸಂಸ್ಥೆಗಳು ಸರಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ದುಬಾರಿ ಶುಲ್ಕವನ್ನು ವಸೂಲಿ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸುಲಿಗೆ ನಡೆಸುತ್ತಿವೆ. ಈ ರೀತಿ ಶುಲ್ಕದ ಹೆಸರಿನಲ್ಲಿ ಸುಲಿಗೆ, ಸರಿಯಾದ ಸಂಖ್ಯೆಯ ಶಿಕ್ಷಕರನ್ನು ನೇಮಿಸದೆ  ಇರುವ ಶಿಕ್ಷಕರಿಗೆ ತಿಂಗಳ ವೇತನವನ್ನೂ ನೀಡದೆ ಸತಾಯಿಸುವುದು, ಕೊಠಡಿಗಳ ಕೊರತೆ ಹೀಗೆ ಮೊದಲಾದ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಗುಣಮಟ್ಟದ ಶಿಕ್ಷಣದಿಂದ ವಂಚಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳ ಫಲಿತಾಂಶ ಮತ್ತು ಅವರ ಭವಿಷ್ಯಕ್ಕೆ ತೊಡಕಾಗುತ್ತಿದ್ದು ಇಂತಹ ಗಂಭೀರ ಸಮಸ್ಯೆಗಳು ಅವರ ಮಾನಸಿಕ ಸ್ಥಿತಿಯನ್ನು ಕುಗ್ಗಿಸುವುದರಿಂದ ಕೆಲವೊಂದು ವಿದ್ಯಾರ್ಥಿಗಳು ಖಿನ್ನತೆಗೊಳಗಾಗಿ ಆತ್ಮಹತ್ಯೆಯಂತಹ ಕೆಲಸಗಳಿಗೆ ಪ್ರೇರೇಪಿಸುತ್ತಿದ್ದೆ.  ಈಗಾಗಲೇ ಮಂಗಳೂರಿನ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಾಲು ಸಾಲು ಶೈಕ್ಷಣಿಕ ಹತ್ಯೆಗಳು ನಡೆದಿದ್ದು ಈ ಕುರಿತು ಜಿಲ್ಲಾಡಳಿತವಾಗಲಿ, ಶಿಕ್ಷಣ ಇಲಾಖೆಯಾಗಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಜಾಣ ಮೌನ ವಹಿಸುವ ಮೂಲಕ ಖಾಸಗೀ ಶಿಕ್ಷಣ ಸಂಸ್ಥೆಗಳ ಒಡೆಯರ ಹಿತವನ್ನು ರಕ್ಷಿಸುತ್ತಿದೆ. 

ಈ ಎಲ್ಲ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಂಗಳೂರಿನ ಖಾಸಗೀ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಶೈಕ್ಷಣಿಕ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಈವರೆಗು ಶಿಕ್ಷಣ ಸಂಸ್ಥೆಗಳಲ್ಲಿ ನಡೆದಿರುವ ಎಲ್ಲ ಆತ್ಮಹತ್ಯೆ ಪ್ರಕರಣಗಳನ್ನು ತನಿಖೆಗೆ  ಒಳಪಡಿಸಬೇಕು. ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರಚೋದಿಸುವ ಹಿಂದಿರುವ ನೈಜ ಕಾರಣಗಳನ್ನು ಪತ್ತೆಹಚ್ಚಬೇಕು ಮತ್ತು ಅವರ ಸಾವಿಗೆ ಕಾರಣರಾದ ಕಾಲೇಜು ಆಡಳಿತ ಮಂಡಳಿಯ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಎಂದು ಜಿಲ್ಲಾ ಸಂಚಾಲಕ ವಿನಿತ್ ದೇವಾಡಿಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು