4:53 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕರಾವಳಿ ಪ್ರಜಾಧ್ವನಿ ಯಶಸ್ವಿಗೆ ಸಂಯೋಜಕರ ನೇಮಕ: ಶಾಸಕ ಡಾ. ಮಂಜುನಾಥ ಭಂಡಾರಿ

05/02/2023, 12:45

ಮಂಗಳೂರು(reporterkarnataka.com): ಪ್ರಜಾಧ್ವನಿಯ ಯಶಸ್ವಿಯ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಇಂದಿನಿಂದ (ಜ.5) ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯಾತ್ರೆಯ ಸಂಘಟನೆಗೆ ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರನ್ನು ಜಿಲ್ಲಾ ಸಂಯೋಜಕರಾಗಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಅವರನ್ನು ಸಹ ಸಂಯೋಜಕಿಯಾಗಿ ನೇಮಕ ಮಾಡಲಾಗಿದೆ.

ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶಿಫಾರಸ್ಸು ಹಾಗೂ ಕರಾವಳಿ ಕರ್ನಾಟಕದ ಸಂಯೋಜಕರಾದ ಬಿ.ಕೆ. ಹರಿಪ್ರಸಾದ್ ಅವರ ಅನುಮತಿ ಮೇರೆಗೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ಉಸ್ತುವಾರಿ ನೇಮಕ ಮಾಡಲಾಗಿದೆ. ಸುಳ್ಯ ಕ್ಷೇತ್ರಕ್ಕೆ ಶಕುಂತಳಾ ಶೆಟ್ಟಿ, ಪುತ್ತೂರಿಗೆ ಜೆ.ಆರ್. ಲೋಬೊ, ಬೆಳ್ತಂಗಡಿಗೆ ಶಶಿಧರ್ ಹೆಗ್ಡೆ, ಬಂಟ್ವಾಳಕ್ಕೆ ಬಿ. ಇಬ್ರಾಹಿಂ, ಮೂಡುಬಿದಿರೆಗೆ ಮಹಾಬಲ ಮಾರ್ಲ, ಮಂಗಳೂರು ಕ್ಷೇತ್ರಕ್ಕೆ ಕವಿತಾ ಸನಿಲ್, ಮಂಗಳೂರು ದಕ್ಷಿಣಕ್ಕೆ ಮೊಯಿದ್ದೀನ್ ಬಾವಾ ಹಾಗೂ ಮಂಗಳೂರು ಉತ್ತರಕ್ಕೆ ಐವನ್ ಡಿಸೋಜ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು