5:34 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಕರಾವಳಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ: ಸ್ಪೀಕರ್ ಯು.ಟಿ. ಖಾದರ್

27/09/2023, 21:30

ಮಂಗಳೂರು(reporterkarnataka.com): ಪ್ರವಾಸಿಗರ ತಾಣವಾಗಿರುವ ಕರಾವಳಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಲು ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದು ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಹೇಳಿದರು.
ಅವರು ಬುಧವಾರ ನಗರದ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಮತ್ತು ಜಿಲ್ಲಾ ಪ್ರವಾಸೋದ್ಯಮ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.


ತುಳುನಾಡು ಸಂಪತ್ತು, ಸಂಸ್ಕøತಿ, ಪರಂಪರೆ ಭರಿತವಾದ ಜಿಲ್ಲೆ. ಇಲ್ಲಿ ಸಮುದ್ರ, ದೇವಾಲಯಗಳು, ಗಿರೀಧಾಮಗಳಿರುವುದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ, ಇಲ್ಲಿನ ಮತ್ತಷ್ಟು ಪ್ರವಾಸಿ ತಾಣಗಳ ಬಗ್ಗೆ ಅವರಿಗೆ ಮಾಹಿತಿ ನೀಡುವ ಕೆಲಸವಾಗಬೇಕು, ತುಳುನಾಡಿನ ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಮ್ಯೂಸಿಯಂ ನಿರ್ಮಾಣವಾದರೆ ಉತ್ತಮ, ಇದರಿಂದಾಗಿ ಇಲ್ಲಿನ ಸಂಸ್ಕøತಿಯನ್ನು ತಿಳಿಸಿಕೊಡಬಹುದಾಗಿದೆ ಎಂದರು.
ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮಾತನಾಡಿದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಎನ್. ಮಾಣಿಕ್ಯ ಸ್ವಾಗತಿಸಿದರು. ಕೌಶಲ್ಯ ಅಭಿವೃದ್ಧಿ ತರಬೇತಿದಾರ ಸಂಜಯ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು