12:36 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Karavali | ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿಯೇ ಸಿರಿ: ಲೇಖಕಿ ಭುವನೇಶ್ವರಿ ಹೆಗಡೆ

08/03/2025, 00:27

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕರಾವಳಿ ಪ್ರದೇಶದಲ್ಲಿ ಸತ್ಯ- ಧರ್ಮ – ನ್ಯಾಯಗಳ ಪ್ರಖರ ಪ್ರತಿಪಾದಕಿಯಾಗಿ ಸ್ತ್ರೀಯರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿದ ದೇವತೆಯೇ ಸಿರಿ. ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿ, ಇಲ್ಲಿಯ ನಂಬಿಕೆಯ ದೈವವಾದ’ಸಿರಿ’ಯೇ ಆಗಿದ್ದಾಳೆ ಎಂದು ಖ್ಯಾತ ಲೇಖಕಿ ಭುವನೇಶ್ವರಿ ಹೆಗಡೆ ಹೇಳಿದರು.


ನಗರದ ನ್ಯಾಯಾಲಯದ ಆವರಣದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಹಾಗೂ ನ್ಯಾಯಾಲಯದ ಉದ್ಯೋಗಿಗಳ ಸಂಘಗಳು ಜಂಟಿಯಾಗಿ ಏರ್ಪಡಿಸಿದ್ದ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ದ.ಕ. ಜಿಲ್ಲಾ ಮತ್ತು ಸೆಷನ್ ಹೆಚ್ಚುವರಿ ನ್ಯಾಯಾಧೀಶರಾದ ಪ್ರೀತಿ. ಕೆ.ಪಿ. ಅವರು ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಹೋರಾಟದ ಹಿನ್ನೆಲೆಯನ್ನು ವಿವರಿಸಿ ಅದಕ್ಕಾಗಿ ಹೋರಾಡಿದ ಮಹಿಳೆಯರನ್ನು ಸ್ಮರಿಸಿದರು.

ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿ, ದಕ್ಷಿಣ ಕನ್ನಡ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕ್ ಅವರು ಇಂದಿನ ಸುಶಿಕ್ಷಿತ ಮಹಿಳೆಯರ ಎದುರು ಅನೇಕ ಸವಾಲುಗಳಿವೆ. ತಮ್ಮ ಆತ್ಮವಿಶ್ವಾಸದಿಂದ ಅವುಗಳನ್ನು ಎದುರಿಸುವ ಛಲ ಹೊಂದಬೇಕು ಎಂದರು.



ವಿವಿಧ ವಿಭಾಗಗಳ ಹಿರಿಯ ನ್ಯಾಯಾಧೀಶರುಗಳು, ಹಿರಿಕಿರಿಯ ವಕೀಲೆಯರು, ಸಿಬ್ಬಂದಿಗಳು ಹಾಜರಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ಅವರು ವಹಿಸಿದ್ದರು. ರಶ್ಮಿ ವಂದಿಸಿದರು.ವಕೀಲ ಸಾಧಕಿಯರನ್ನು ಸನ್ಮಾನಿಸಲಾಯಿತು.
ಕೊನೆಯಲ್ಲಿ ಮನರಂಜನಾ ಕಾರ್ಯಕ್ರಮಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು