7:57 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕರಾವಳಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿರುವ ನಿರ್ಬಂಧ ತೆರವಿಗೆ ಕ್ರಮ: ಉಡುಪಿಯಲ್ಲಿ ಸಿಎಂ ಬೊಮ್ಮಾಯಿ 

13/10/2021, 19:15

ಉಡುಪಿ(reporterkarnataka.com): ರಾಜ್ಯದ ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ನಡೆಸದಂತೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ಉಡುಪಿ ಕುಂತಲ ನಗರದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘ ಆಯೋಜಿಸಿದ್ದ ಕನ್ವೆನ್ಷನ್ ಸೆಂಟರ್ ಮತ್ತು ತರಬೇತಿ ಕೇಂದ್ರ ಕೇಂದ್ರವನ್ನು ಇಂದು ಉದ್ಘಾಟಿಸಿ, ಬಳಿಕ ಉದ್ಯಮಿಗಳೊಂದಿಗೆ ನಡೆಸಿದ ಚಾಯ್ ಪೆ ಚರ್ಚಾ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು. 

ನಮ್ಮ ಪಕ್ಕದ ರಾಜ್ಯಗಳಾದ ಕೇರಳ ಮತ್ತು ಗೋವಾದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲಾಗಿದೆ. ಆ ಮೂಲಕ ಹೆಚ್ಚಿನ ಆದಾಯವನ್ನು ಗಳಿಸಿಕೊಳ್ಳುತ್ತಿವೆ. ಆದರೆ ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಎಷ್ಟು ಸದ್ಬಳಕೆ ಮಾಡಿಕೊಳ್ಳಬೇಕಿತ್ತೋ ಅಷ್ಟು ಆಗಿಲ್ಲ ಎಂದು ಅವರು ವಿಷಾದಿಸಿದರು.  


ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಆರ್ಥಿಕ ಚಟುವಟಿಕೆ ನಡೆಸದಂತೆ ನಿರ್ಬಂಧ ಹಾಕಿರುವ ಕಾನೂನು ರಾಜ್ಯದಲ್ಲಿ ಜಾರಿಯಲ್ಲಿದೆ. ಇದರಿಂದ ಪ್ರವಾಸೋದ್ಯಮ ಉತ್ತೇಜನಕ್ಕೆ ಅಡ್ಡಿಯಾಗುತ್ತದೆ ಎಂಬ ಆರೋಪವೂ ಇದೆ. ಹೀಗಾಗಿ ಈ ಕಾನೂನನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು