1:48 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ 660 ಟನ್ ಗೇರು ಬೀಜ ಉತ್ಪನ್ನ; ಇನ್ನಷ್ಟು ಅಭಿವೃದ್ಧಿಗೆ ಪ್ರತಿಯೊಂದು ಮನೆಗೂ ಗೇರು ಗಿಡ: ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ

11/03/2024, 22:11

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯದ ಕರಾವಳಿಯಲ್ಲಿ 660 ಟನ್ ಗೇರು ಬೀಜ ಉತ್ಪತ್ತಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗೇರು ಕೃಷಿಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರತಿಯೊಂದು ಮನೆಗೂ ಒಂದು ಗೇರು ಗಿಡವನ್ನು ವಿತರಿಸಲಾಗುವುದು ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ಅವರು ಸೋಮವಾರ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುದರು.

ಹಿಂದಿನ ಕಾಲದಲ್ಲಿ ಪ್ರತಿಯೊಂದು ಮನೆಯ ಮುಂದೆಯೂ ಒಂದೊಂದು ಗೇರು ಮರ ಇರುತ್ತಿತ್ತು. ಆದರೆ ಇತ್ತೀಚಿನ ದಿನದಲ್ಲಿ ಯಾವ ಮನೆಯ ಎದುರಲ್ಲೂ ಗೇರು ಮರ ನೋಡಲು ಸಿಗುವುದಿಲ್ಲ. ಆದುದರಿಂದ ಮತ್ತೆ ಮನೆ ಮನೆಗೆ ಗೇರು ಗಿಡವನ್ನು ವಿತರಿಸಲಾಗುವುದು. ಒಂದು ಗೇರು ಗಣ್ಣು ತಿನ್ನುವುದರಿಂದ ಅದರಲ್ಲಿ ವಿಟಮಿನ್ ‘ಸಿ’ ಅಂಶ ಹೆಚ್ಚಾಗಿದ್ದು, ಮಕ್ಕಳ ಆರೋಗ್ಯ ವೃದ್ಧಿಸುವುದು ಎಂದರು.
ಮೊದಲಿಗೆ ವಿದೇಶದಿಂದ ಗೇರು ಕೃಷಿ ಬಂದದ್ದಾದರೂ ನಂತರದ ದಿನಗಳಲ್ಲಿ ನಮ್ಮಲ್ಲಿ ಗೇರು ಕೃಷಿ ಉತ್ತಮ ರೀತಿಯಲ್ಲಿ ಬೆಳೆದಿದ್ದು, ಈಗ ರಾಜ್ಯದಲ್ಲಿ 53 ಸಾವಿರ ಟನ್ ಗೇರು ಬೀಜ ಉತ್ಪನ್ನವಾಗುತ್ತಿದ್ದು, ಕರಾವಳಿಯಲ್ಲಿ 660 ಟನ್ ಗೇರು ಬೀಜ ಉತ್ಪತ್ತಿಯಾಗುತ್ತಿದೆ ಎಂದು ಹೇಳಿದರು.
ಕರಾವಳಿಯಲ್ಲಿ 9 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಗೇರು ಕೃಷಿ ನಡೆಯುತ್ತಿದ್ದು, ದೇಶದಲ್ಲಿ 5ನೇ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಉತ್ಪನ್ನದಲ್ಲಿ 6ನೇ ಸ್ಥಾನದಲ್ಲಿದೆ. ಕಳೆದ ವರ್ಷ ಕರಾವಳಿಯಲ್ಲಿ 414 ಲಕ್ಷ ಗೇರು ಬೀಜದಿಂದ ಆದಾಯ ಬಂದಿದ್ದು, ಇದನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಸಚಿವರೊಂದಿಗೆ ಹಾಗೂ ವಿಧಾನಸಭಾ ಸ್ಪೀಕರ್ ಅವರೊಂದಿಗೆ ಮಾತನಾಡಿದ್ದು, ಅನುದಾನ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದರು.
ಕೃಷಿಯ ಅಭಿವೃದ್ಧಿಗೆ ಅರಣ್ಯ ಸಚಿವರಲ್ಲಿ ನರ್ಸರಿ ಸ್ಥಾಪನೆಗಾಗಿ 50 ಕೋಟಿ ಅನುದಾನವನ್ನು ನೀಡಿದ್ದು, ಇದರಿಂದ ಹೊಸ ಗಿಡಗಳನ್ನು ನೆಡಲಾಗುವುದು. ಈಗ ಎನ್‌ಹೆಚ್‌ಎಂ, ಆರ್‌ಕೆವಿಐ, ಡಿಸಿಡಿಇ ಇಂದ ಮಾತ್ರ ಅನುದಾನ ಬರುತ್ತಿದ್ದು, ಇದು ನಿರ್ವಹಣೆಗೆ ಸರಿಓಗುತ್ತಿದೆ. ಆದುದರಿಂದ ಕೃಷಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೋಬಳಿ ಮಟ್ಟದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುವುದು, ನಂತರದ ದಿನಗಳಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಸಚಿವರ ಸಮ್ಮುಖದಲ್ಲಿ ನಡೆಸಲಾಗುವುದು ಎಂದು ಹೇಳಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲಾ, ಪ್ರಶಾಂತ್ ಕಜಾವ, ಚಂದ್ರಹಾಸ್ ಕರ್ಕೆರ, ಅಪ್ಪಿ, ಶಶಿರೇಖಾ, ಕಲಾ ಮತ್ತಿತರರು ಉಪಸ್ಥಿತರಿದ್ದರು.



ಈ ಸಂದರ್ಭದಲ್ಲಿ ನೂತನ ಗೇರು ಬೀಜ ನಿಗಮ ಮಂಡಳಿ ಅಧ್ಯಕ್ಷೆ ಮಮತಾ ಗಟ್ಟಿಯಾರವನ್ನು ಪಾಲಿಕೆ ವಿಪಕ್ಷ ನಾಯಕ ಟಿ.ಪ್ರವೀಣ್ ಚಂದ್ರ ಆಳ್ವ,ಕಾಂಗ್ರೆಸ್ ನಾಯಕ ಪ್ರಶಾಂತ್ ಕಾಜವ,ಕಾಂಗ್ರೆಸ್ ಮಹಿಳಾ ಮಣಿಗಳು,ಅಧ್ಯಕ್ಷೆ ಮಮತ ಗಟ್ಟಿಯವರ ಗಂಡ ಮಗಳು,ಮಂಗಳೂರು ಪತ್ರಕರ್ತ ಸಂಘದ ವತಿಯಿಂದ ಸನ್ಮಾನಿಸಿ ಶುಭಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು