ಇತ್ತೀಚಿನ ಸುದ್ದಿ
ಕರಾವಳಿಯಲ್ಲಿ ಮಳೆ: ದ.ಕ. ಜಿಲ್ಲೆಯ ಶಾಲೆಗಳಿಗೆ ಮಾತ್ರ ನಾಳೆ ರಜೆ; ಕಾಲೇಜುಗಳಿಗೆ ಇಲ್ಲ
26/07/2023, 21:54
ಮಂಗಳೂರು(reporterkarnataka.com): ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವುದರಿಂದ ನಾಳೆಯೂ (ಜುಲೈ 27ರಂದು) ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ(ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ) ರಜೆ ಘೋಷಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ನದಿ, ಕೆರೆ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಅಧಿಕಾರಿಗಳು ಜಿಲ್ಲಾ ಮತ್ತು ತಾಲೂಕು ಕೇಂದ್ರ ಸ್ಥಾನದಲ್ಲಿರುವಂತೆ ಸೂಚಿಸಲಾಗಿದೆ.