ಇತ್ತೀಚಿನ ಸುದ್ದಿ
ಕಾರವಾರ: ಕೊರೊನಾ ಕರ್ಫ್ಯೂ ನಿಯಮಗಳಿಗೆ ಮತ್ತಷ್ಟು ಕ್ರಮ ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಆದೇಶ
23/05/2021, 20:01
ಕಾರವಾರ(reporterkarnataka news): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಮೇ 24 ರಿಂದ ಜೂನ್ 7ರವರೆಗೆ ಸರಕಾರ ವಿಧಿಸಿರುವ ಕರ್ಫ್ಯೂ ನಿಯಮಗಳಿಗೆ ಮತ್ತುಷ್ಟು ಕಠಿಣ ಕ್ರಮಗಳನ್ನು ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಭಾನುವಾರ ಆದೇಶ ಹೊರಡಿಸಿದ್ದಾರೆ
ಮೇ 24 ರ ಬೆಳಗ್ಗೆ 6 ಗಂಟೆಯಿಂದ ಜೂನ್ 7 ರ ಬೆಳಗ್ಗೆ 6 ಗಂಟೆಯವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತರಕಾರಿ, ದಿನಸಿ ಮತ್ತಿತರ ಜೀವನಾವಶ್ಯಕ ವಸ್ತುಗಳನ್ನು ಅಂಗಡಿಗಳಿಗೆ ತೆರಳಿ ಖರೀದಿ ಮಾಡಲು ಅವಕಾಶವಿದೆ. ಉಳಿದ ದಿನಗಳಲ್ಲಿ ಮನೆಮನೆಗೆ ಪೂರೈಕೆ ಮಾಡಲಾಗುತ್ತದೆ.
ಮದುವೆ ಕಾರ್ಯಗಳಿಗೆ ಅನುಮತಿ ನೀಡಲಾಗುವುದಿಲ್ಲ. ಸೂಕ್ತ ಗುರುತಿನ ಚೀಟಿ ಹೊಂದಿರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.