2:58 PM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಖರ್ಗೆ ಎಐಸಿಸಿ ಅಧ್ಯಕ್ಷರಾದರೂ ಆಡಳಿತ ಗಾಂಧಿ ಕುಟುಂಬದಿಂದಲೇ: ಸಚಿವ ಸುನಿಲ್ ಕುಮಾರ್

23/10/2022, 12:01

ಉಡುಪಿ(reporterkarnataka.com):
ಕಾಂಗ್ರೆಸ್ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ತಡವಾಗಿ ಎಚ್ಚೆತ್ತುಕೊಂಡಿದ್ದು, ಗಾಂಧಿ ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರುವುದಕ್ಕೆ ಆಗಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ‌ ಅಧ್ಯಕ್ಷರಾಗಿದ್ದರೂ, ಪಕ್ಷದ ಆಡಳಿತ ಮತ್ತು ನಿರ್ವಹಣೆ ಗಾಂಧಿ ಕುಟುಂಬದಿಂದಲೇ ನಡೆಯುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಲೇವಡಿ ಮಾಡಿದರು
ಉಡುಪಿ ಪತ್ರಿಕಾಭವನದಲ್ಲಿ ನಡೆದ ಸುದ್ದಿಗಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಮುಖಂಡ ಶಶಿ ತರೂರ್ ಎಐಸಿಸಿ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. 75 ವರ್ಷಗಳಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ನಲ್ಲಿ ಮತದಾರರ ಪಟ್ಟಿ ಸಿದ್ದವಾಗಿದೆ ಎಂದರು.
ಬಿಜೆಪಿಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಬೂತ್ ಮಟ್ಟದಿಂದ ರಾಷ್ಟ್ರೀಯ ಅಧ್ಯಕ್ಷರವರೆಗೂ ಬದಲಾವಣೆ ಮಾಡಲಾಗುತ್ತದೆ. ಬಿಜೆಪಿಯಲ್ಲಿಯೂ ನಾಮಪತ್ರ ಸಲ್ಲಿಸಿಯೇ ಅಧ್ಯಕ್ಷರ ಆಯ್ಕೆಯಾಗುತ್ತದೆ. ಪಕ್ಷದ ಆಂತರಿಕ ವ್ಯವಸ್ಥೆಯಲ್ಲಿಯೂ 33% ಮಹಿಳೆಯರಿಗೆ ಮೀಸಲಾತಿ ಇದೆ ಎಂದು ಹೇಳಿದರು
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ನೀಡಿರುವ ಭಗವದ್ಗೀತೆಯಲ್ಲಿ ಜಿಹಾದ್ ಭೋದಿಸಲಾಗಿದೆ ಎಂಬ ಹೇಳಿಕೆಯನ್ನು ಖಂಡಿಸಿದ ಸಚಿವರು, ಈ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುತ್ತದೆಯೇ..? ತನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಶಿವರಾಜ್ ಪಾಟೀಲ್ ಮೂಲಕ ಹೇಳಿಸಿದೆಯೇ..? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು