4:48 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕಾರ್ಗಿಲ್ ವಿಜಯ ದಿವಸ: ಕದ್ರಿ ಪಾರ್ಕ್ ಬಳಿಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ

26/07/2025, 22:54

ಮಂಗಳೂರು(reporterkarnataka.com): ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಾಯಿತು.


ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ ಕುಮಾರ್ ಪಾಂಡೆಯರಂತಹ 527 ವೀರಕಲಿಗಳನ್ನು ಕಳೆದುಕೊಂಡಿದ್ದೇವೆ. ಈ ದಿನ ಅಂತಹ ಎಲ್ಲಾ ವೀರ ಯೋಧರ ಧೈರ್ಯವನ್ನು, ಅವರ ಕುಟುಂಬಗಳ ತ್ಯಾಗವನ್ನು ಪ್ರತಿಯೊಬ್ಬರೂ ನೆನೆಯಲೇಬೇಕು. ದಯವಿಟ್ಟು ನಾವೆಲ್ಲರೂ ಆಗಾಗ ಮಕ್ಕಳೊಂದಿಗೆ ಯುದ್ಧ ಸ್ಮಾರಕಗಳಿಗೆ ಭೇಟಿ ನೀಡಿ, ಅವರಿಗೆ ಸೈನಿಕರ ಮಹತ್ವವನ್ನು ತಿಳಿಸಬೇಕು. ಇಂದು ನಮ್ಮ ಸೈನ್ಯ ಮತ್ತು ದೇಶದ ಭದ್ರತೆಯ ವಿಷಯ ಬಂದಾಗ ಸೈನ್ಯಕ್ಕೆ ಸಂಪೂರ್ಣ ಅಧಿಕಾರ ಕೊಡುವ ಪ್ರಧಾನಿ ನರೇಂದ್ರ ಮೋದಿಯಿಂದಾಗಿ ಭಾರತವು ಅತ್ಯಂತ ಬಲಿಷ್ಠವಾಗಿದೆ. ಹಾಗಾಗಿಯೇ ಪಾಕಿಸ್ತಾನ ಮಾತ್ರವಲ್ಲದೇ ಚೀನಾಕ್ಕೂ ಅವರದೇ ಭಾಷೆಯಲ್ಲಿ ಉತ್ತರ ಕೊಟ್ಟಾಗಿದೆ ಎಂದರು.
ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ಗಣೇಶ್ ಕಾರ್ಣಿಕ್, ರವಿಶಂಕರ್ ಮಿಜಾರ್, ಅಶ್ವಿತ್ ಕೊಟ್ಟಾರಿ, ನಿಕಟಪೂರ್ವ ಮ.ನ.ಪಾ ಸದಸ್ಯರುಗಳು, ಮಾಜಿ ಸೈನಿಕರು, ಮಂಡಲದ ಯುವ ಮೋರ್ಚಾದ ಎಲ್ಲಾ ಪದಾಧಿಕಾರಿಗಳು, ಜಿಲ್ಲಾ ಪ್ರಮುಖರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಪ್ರಮುಖರು, ಕಾರ್ಯಕರ್ತರು, ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು