7:10 PM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕಾರಿನಲ್ಲಿ ಜತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ತಡೆದು ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ; 5 ಮಂದಿ ಬಂಧನ

28/09/2021, 13:15

ಮಂಗಳೂರು(reporterkarnataka.com): ಜತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ತಡೆದು ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಟೋಲ್ ಬೂತ್ ಬಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದೇರಳಕಟ್ಟೆಯ ಕಾಲೇಜೊಂದರಲ್ಲಿ ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಜತೆಯಾಗಿ ಪ್ರಯಾಣಿಸುತ್ತಿದ್ದರು. ಕಾರನ್ನು ತಡೆದ ಪುಂಡರ

ಗುಂಪೊಂದು ಪೊಲೀಸರ ಸಮ್ಮುಖದಲ್ಲಿಯೇ, ಕಾರಿನಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ಬಯ್ಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಧರ್ಮದ ಹೆಸರಲ್ಲಿ ಕೆಲವು ಕಿಡಿಗೇಡಿಗಳು ಅಶಾಂತಿ ಸೃಷ್ಟಿಸಲು ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರೀತಂ ಶೆಟ್ಟಿ, ಅರ್ಶಿತ್,  ಶ್ರೀನಿವಾಸ್, ರಾಕೇಶ್ ಮತ್ತು ಅಭಿಷೇಕ್  ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು