10:02 PM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಕಾರ್ಕಳ: ಗೃಹ ಸಚಿವರ ವಿರುದ್ಧ ಜಾತಿ ನಿಂದನೆ ಕಮೆಂಟ್: ಕೆರ್ವಾಶೆ ನಿವಾಸಿಯ ಬಂಧನ

07/06/2026, 21:10

ಕಾರ್ಕಳ(reporterkarnataka.com): ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಹಾಗೂ ಅವಹೇಳನಕಾರಿ ಕಾಮೆಂಟ್‌ ಮಾಡಿದ್ದ ಆರೋಪಿ ಸುಧೀರ್‌ ಬಂಗೇರ (48) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕೆರ್ವಾಶೆ ನಿವಾಸಿ ಸುಧೀರ್‌ ಬಂಗೇರ ಫೇಸ್‌ಬುಕ್‌ ಪೇಜ್ ನಲ್ಲಿ ಗೃಹ ಸಚಿವರ ಕುರಿತಾದ ಪೋಸ್ಟ್‌ವೊಂದರಲ್ಲಿ ಸಚಿವರ ಜಾತಿಯನ್ನು ಉಲ್ಲೇಖಿಸಿ ನಿಂದಿಸಿದ್ದಲ್ಲದೆ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ವಿವಿಧ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಉದ್ದೇಶದ ಕಾಮೆಂಟ್‌ ಮಾಡಿದ್ದ ಎಂದು ಸುರೇಶ್ ಎಂಬುವರು ದೂರು ನೀಡಿದ್ದರು.
​ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು