5:21 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆ: ಮನೆಗೆ ಸಿಡಿಲು ಬಡಿದು ಹಾನಿ

29/10/2023, 23:33

ಕಾರ್ಕಳ(reporterkarnataka.com): ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಗುಡುಗು ಸಹಿತ  ಸಾಮಾನ್ಯ ಮಳೆಯಾಗಿದ್ದು, ಕಣಂಜಾರು ಗ್ರಾಮದ ಪೆಲತ್ತೂರು ಪಟ್ಲದ ಮನೆಯೊಂದಕ್ಕೆ ಸಿಡಿಲು ಬಡಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತು ಹಾನಿಯಾಗಿದೆ.
ಬಜಗೋಳಿ, ನಾರಾವಿ , ಮಾಳ ಚೌಕಿ ಕಡಾರಿ , ಕೆರುವಾಶೆ , ಶಿರ್ಲಾಲು , ಈದು, ಕಣಂಜಾರು , ಗಾಳಿ ಸಿಡಿಲಿನಿಂದ ಆವೃತವಾದ ಮಳೆ ಸುರಿದಿದೆ. ಕೆಲವು ಕಡೆಗಳಲ್ಲಿ ಮಳೆಯಿಂದ ಹಾನಿ ಸಂಭವಿದಿದೆ.


ಹೆಬ್ರಿ ತಾಲೂಕಿನಲ್ಲಿ ಮಳೆಯಾಗಿದ್ದು,ಭಾನುವಾರ ಕೆಲವೆಡೆ ತುಂತುರು ಮಳೆ ಸುರಿದಿದ್ದು, ವರಂಗ ಗ್ರಾಪಂ ವ್ಯಾಪ್ತಿಯ ಮುನಿಯಾಲು, ನಾಡ್ಪಾಲು, ಕಬ್ಬಿನಾಲೆ ಭಾಗಗಳಲ್ಲಿ ಮಳೆಯಾಗಿದೆ.  ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನಿಂದ ಕೂಡಿದ ವಾತಾವರಣದಿಂದ  ತಂಪಾಗಿಸಿದೆ.
ಕಾರ್ಕಳ ತಾಲೂಕಿನ ಕಣಂಜಾರು ಗ್ರಾಮದ ಪೆಲತ್ತೂರು ಪಟ್ಲ ದೇವೇಂದ್ರ ನಾಯಕ್ ಎಂಬವರ ಮನೆಯ ಪಕ್ಕದಲ್ಲಿ ಸಿಡಿಲು ಬಡಿದಿದ್ದು, ಈ ಮೂಲಕ ಸಾವಿರಾರು ಮೌಲ್ಯದ ವಿದ್ಯುತ್ ಉಪಕರಣಗಳು ಹಾನಿಗೀಡಾಗಿವೆ.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಕಾರ್ಕಳ ಹಾಗೂ ಹೆಬ್ರಿಯಲ್ಲಿ ಸಿಡಿಲಿನ ಆರ್ಭಟಕ್ಕೆ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯವಾಗಿದ್ದು ಜನಸಾಮಾನ್ಯರು ತೊಂದರೆಗೀಡಾದರು.

ಇತ್ತೀಚಿನ ಸುದ್ದಿ

ಜಾಹೀರಾತು