5:21 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕಾರ್ಕಳ: ಕೇಂದ್ರ ಸರಕಾರದ ಇ-ಶ್ರಮ ಯೋಜನೆ; ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ

01/09/2021, 08:46

ಕಾರ್ಕಳ(reporterkarnataka.com):ಮನೆ ಮನೆಗೂ ತಲುಪಲಿ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಉಡುಪಿಯ ಯೂತ್ ಫಾರ್ ಸೇವಾದ ಆಶ್ರಯದಲ್ಲಿ ಯುವವಾಹಿನಿ(ರಿ) ಕಾರ್ಕಳ ಘಟಕದ ಸಹಕಾರ ಮತ್ತು ಸೇವಾ ಸಿಂಧು ಸಂಯೋಜನೆಯಲ್ಲಿ ಕಾರ್ಕಳದ ಎಲ್ಲ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ ಕಾರ್ಯಕ್ರಮ ರಾಮಪ್ಪ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲಾಜಿ ಶಿಬಿರದ ಗುರುಗಳಾದ ಬಾಲಕೃಷ್ಣ ಹೆಗ್ಡೆ ಭಾರತಂಬೆಗೆ ಹೂವು ಹಾಕಿ, ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿದರು. ಇ-ಶ್ರಮ ಯೋಜನೆಯ ರೂಪುರೇಷೆಗಳನ್ನು ಗಣೇಶ ದಿಶಾನಿ ಅವರು ವಿವರಿಸಿದರು. ಕಾರ್ಯಕ್ರಮದ ನಿರೂಪಣೆ ಯೂಥ್ ಫಾರ್ ಸೇವಾ ತಂಡದ ರಮಿತಾ ಶೈಲೆಂದ್ರ ರಾವ್ ಮಾಡಿದರು. ಯುವ ವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಲಿಯಾನ್ ಬಂಧಿಸಿದರು.

ವೇದಿಕೆಯಲ್ಲಿ ಕಾರ್ಕಳ ಪುರಸಭೆ ಸದಸ್ಯರಾದ ಮೀನಾಕ್ಷಿ, ಸೇವಾ ಸಿಂಧೂ ಅನಿಲ್ ಕಾಮತ್ ಹಾಗೂ ಕಾರ್ಕಳ ಕಾರ್ಮಿಕ ಇಲಾಖೆಯ

ಮೋಹನ್ ಶೆಣೈ ಅವರು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಯೂತ್ ಫಾರ್ ಸೇವಾ ತಂಡದ ಸದಸ್ಯರು, ಯುವ ವಾಹಿನಿ ತಂಡದ ಸದಸ್ಯರು ಹಾಗೂ ಕಾರ್ಕಳ ಕಾರ್ಕಳದ ಸುಮಾರು 780 ಕ್ಕೂ ಮಿಕ್ಕಿದ ಫಲಾನುಭವಿ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು