2:22 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಕಾರ್ಕಳ: ಯುವತಿ ಅಪಹರಿಸಿ ಅತ್ಯಾಚಾರ; ಇಬ್ಬರ ಬಂಧನ

24/08/2024, 23:10

ಕಾರ್ಕಳ(reporterkarnataka.com): ಸುಮಾರು 21ರ ಹರೆಯದ ಯುವತಿಯೊಬ್ಬಳ ಅಪಹರಿಸಿ, ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನುಷ ಘಟನೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಲ್ತಾಫ್ (34) ಮತ್ತು ಕ್ಸೆವಿಯರ್ ರಿಚರ್ಡ್ ಕ್ವಾಡ್ರಸ್ (35) ಎಂದು ಗುರುತಿಸಲಾಗಿದೆ.
ಅತ್ಯಾಚಾರಕ್ಕೊಳಗಾದ ಯುವತಿ ಮತ್ತು ಅಲ್ತಾಫ್ ಕಳೆದ 3 ತಿಂಗಳಿಂದ ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯವಾಗಿದ್ದರು. ಶುಕ್ರವಾರ ಮಧ್ಯಾಹ್ನ ಅಲ್ತಾಫ್ ಒಂದು ಕಡೆಗೆ ಬರಲು ಹೇಳಿದ್ದ. ಅಲ್ಲಿಗೆ ಹೋದ ಯುವತಿಯನ್ನು ಅಲ್ತಾಫ್ ಕಾರಿನಲ್ಲಿ ಅಪಹರಿಸಿ ಕಾಡಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಆತನ ಇಬ್ಬರು ಸ್ನೇಹಿತರು ಬಂದು ಮದ್ಯ ತಂದು ಕೊಟ್ಟರು. ನಂತರ ಅಲ್ತಾಫ್ ಮದ್ಯಕ್ಕೆ
ಏನನ್ನು ಬೆರೆಸಿ ಬಲವಂತವಾಗಿ ಯುವತಿಗೆ ಕುಡಿಸಿ, ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆಕೆಯನ್ನು ಅಲ್ತಾಫ್ ಮನೆಯ ಬಳಿ ಕಾರಿನಲ್ಲಿ ಕರೆತಂದು ಬಿಟ್ಟು ಹೋಗಿದ್ದ, ತೀವ್ರ ಅಸ್ವಸ್ಥಳಾಗಿದ್ದ ಆಕೆಯನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಅಲ್ತಾಫ್ ನನ್ನು ಬಂಧಿಸಿ, ಯುವತಿಯ ಅಪಹರಣಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಆತನಿಗೆ ಬಿಯರ್ ಬಾಟಲ್ ತಂದುಕೊಟ್ಟ ಕ್ಸೇವಿಯರ್ ನನ್ನು ಬಂಧಿಸಿ ಮತ್ತು ಆತನ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಈ ನಡುವೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಪ್ರಕರಣದ ದೂರು ಮತ್ತು ಮೆಡಿಕಲ್ ರಿಪೋರ್ಟ್ ನಲ್ಲಿ ಇಲ್ಲದ ಮಾಹಿತಿಗಳನ್ನು ಹರಿಯ ಬಿಡಲಾಗುತ್ತಿದೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಸಾಮಾಜಿಕ ಜಾಲತಾಣಗಳ ಮೇಲೆ ಮತ್ತು ಅವುಗಳನ್ನು ವೈರಲ್ ಮಾಡುತ್ತಿರವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು