8:38 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಕಾರ್ಕಳ ಕೋಟೆಕಣಿಯಲ್ಲಿ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆ!: ಕಳೆದಿ ಆಳ್ವಿಕೆ ಕಾಲದ್ದು ಶಂಕೆ

03/12/2022, 23:29

ಕಾರ್ಕಳ(reporterkarnataka.com): ಐತಿಹಾಸಿಕ ಹಿನ್ನಲೆಯುಳ್ಳ ಕಾರ್ಕಳ ಸರಕಾರಿ ಆಸ್ಪತ್ರೆ ಬಳಿಯ ಕೋಟೆಕಣಿ ಪರಿಸರದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಕಾಮಗಾರಿಗೆಂದು ಹಿಟಾಚಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಫಿರಂಗಿ ಮಾದರಿಯ ಕಲ್ಲುಗುಂಡುಗಳು ಪತ್ತೆಯಾಗಿವೆ. ಉದ್ಯಮಿಯೊಬ್ಬರು ಖರೀದಿಸಿದ್ದ ಈ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಭೂಮಿಯನ್ನು ಅಗೆಯುತ್ತಿದ್ದಾಗ ಸುಮಾರು 15 ಅಡಿ ಆಳದಲ್ಲಿ ವೃತ್ತಾಕಾರದ ನೂರಾರು ಕಲ್ಲು ಗುಂಡುಗಳು ಪತ್ತೆಯಾಗಿವೆ.
ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್ ಪುರಂದರ ಎಸ್ ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉತ್ಖನನದಿಂದ ಸಿಕ್ಕಿರುವ ಕಲ್ಲು ಗುಂಡುಗಳನ್ನು ಪುರಾತತ್ವ ಇಲಾಖೆಗೆ ಒಪ್ಪಿಸಲಾಗಿದೆ.

ಇತಿಹಾಸಕಾರರ ಪ್ರಕಾರ ಕಳೆದಿಯ ಶಿವಪ್ಪ ನಾಯಕನ ಆಳ್ವಿಕೆಯಲ್ಲಿ ಇಲ್ಲಿ ಕೋಟೆ ನಿರ್ಮಿಸಲಾಗಿತ್ತು. ಬಳಿಕ ಟಿಪ್ಪು ಶಿವಪ್ಪ ನಾಯಕನ ಕೋಟೆಗೆ ದಾಳಿ ನಡೆಸಿದ್ದ ಎನ್ನುವುದು ಇತಿಹಾಸಕಾರರ ಅಭಿಪ್ರಾಯವಾಗಿದೆ. ವೈರಿಗಳ ವಿರುದ್ಧ ಫಿರಂಗಿ ದಾಳಿಗೆ ಈ ಕಲ್ಲು ಗುಂಡುಗಳನ್ನು ಬಳಸಿಕೊಂಡಿರುವ ಸಾಧ್ಯತೆಯಿದೆ ಎಂಬುವುದಾಗಿ ಇತಿಹಾಸಕಾರರು ಉಲ್ಲೇಖಿಸಿದ್ದಾರೆ. ವೈರಿಗಳಿಂದ ರಕ್ಷಿಸಿಕೊಳ್ಳಲು ಕೋಟೆಯ ಸುತ್ತಲೂ ಕಂದಕ ನಿರ್ಮಿಸಿದ್ದರಿಂದ ಈ ಸ್ಥಳಕ್ಕೆ ಕೋಟೆಕಣಿ ಎಂದೇ ಹೆಸರು ಬಂದಿತ್ತು ಅಲ್ಲದೇ ಇದೇ ಹೆಸರು ಇಂದಿಗೂ ಚಾಲ್ತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು