9:06 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಾರ್ಕಳ: ನಾಡಿಗೆ ಬಂದ ಕಾಡುಕೋಣ ನೇರ ಮನೆಯಂಗಳ ಸೇರಿತು!; ನಾಡ ಮಂದಿಗೆ ಮಾತ್ರ ಭಾರಿ ಆತಂಕ

29/03/2022, 21:31

ಕಾರ್ಕಳ(reporterkarnataka.com): ಇಲ್ಲಿನ ನೀರೆ ಗ್ರಾಮದಲ್ಲಿ ಕಾಡುಕೋಣವೊಂದು ಮನೆಯಂಗಳಕ್ಕೆ ನುಗ್ಗಿದ ಘಟನೆ ಇಂದು ನಡೆದಿದೆ. 

ಕಾಡಿನಿಂದ ಏಕಾಏಕಿಯಾಗಿ ಮನೆಯಂಗಳಕ್ಕೆ ಕಾಡುಕೋಣ ಬಂದಿದ್ದು, ಇದರಿಂದ ಮನೆಯವರು ಆತಂಕಕ್ಕೊಳಗಾದರು. ಬಳಿಕ ಮನೆಮಂದಿ ಸೇರಿ ಕಾಡುಕೋಣವನ್ನು ಓಡಿಸಿದರು.

ಆದರೆ ಕಾಡುಕೋಣವು ಗ್ರಾಮದ ಏಕೈಕ ಸಂರ್ಪಕ ರಸ್ತೆಯಲ್ಲಿ ಅಡ್ಡವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದು, ಇದರಿಂದ ಗ್ರಾಮಸ್ಥರ ಒಡಾಟಕ್ಕೆ ಅಡಚಣೆಯಾಯಿತು. ಆ ನಂತರ ಗ್ರಾಮಸ್ಥರು ಹರಸಾಹಸಪಟ್ಟು ಕೋಣವನ್ನು ಕಾಡಿಗೆ ಅಟ್ಟಿದರು. 

ಈ ಭಾಗದಲ್ಲಿ ಆಗಾಗ್ಗೆ ಕಾಡುಕೋಣ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಜನರು ಭೀತಿಗೊಂಡಿದ್ದಾರೆ. 

ಕೆಲ ದಿನಗಳ ಹಿಂದೆ ನೀರೆ ಗ್ರಾಮದ ಹತ್ತಿರ ಪಂಚನಬೆಟ್ಟು ಎಂಬಲ್ಲಿ ಕಾಡುಕೋಣವೊಂದು ಪಾಳುಬಾವಿಗೆ ಬಿದ್ದಿದ್ದು, ಅದನ್ನು ಬಳಿಕ ಅರಣ್ಯ ಇಲಾಖೆಯವರು‌ ರಕ್ಷಣೆ ಮಾಡಿದ್ದರು. 

ಬೊಮ್ಮಾರಬೆಟ್ಟು, ನಿರೇ ಗ್ರಾಮ ಸಹಿತ ವಿವಿಧ ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚುತ್ತಿದ್ದು, ಕಾಡು ಬಿಟ್ಟು ನಾಡಿಗೆ ಬರಲು ಆರಂಭಿಸಿವೆ. 

ಇದರಿಂದ ಜನರು ಆತಂಕದಿಂದಲೇ ದಿನ ಕಳೆಯುವಂತಾಗಿದೆ. ಹಾಗಾಗಿ ಅರಣ್ಯ ಇಲಾಖೆಯವರು ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು