7:39 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಕಾರ್ಕಳ ಸಮೀಪ ಬಸ್ಸು – ಬೊಲೆರೋ ಭೀಕರ ಅಪಘಾತ: ಓರ್ವನ ಸ್ಥಳದಲ್ಲೇ ಸಾವು; ಇಬ್ಬರ ಸ್ಥಿತಿ ಗಂಭೀರ

10/12/2023, 21:29

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ಬಸ್ಸು ಮತ್ತು ಬೊಲೆರೋ ಡಿಕ್ಕಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮ್ರತಪಟ್ಟು ಇಬ್ಬರ ಸ್ಥಿತಿ ಗಂಬೀರಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ(48) ಸ್ಥಳದಲ್ಲೇ ಮೃತಪಟ್ಟರೆ, ಮಂಜು (45 ), ಸುಜಯ (28) ಅವರ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಂದಳಿಕೆ ಕಡೆಯಿಂದ ಬರುತ್ತಿದ್ದ ಬೋಲೆರೊ ಕಾರು ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ನಂದಳಿಕೆಗೆ ಬೆಳಿಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನದ ಭೋಜನ ಮುಗಿಸಿ ಹಿಂತಿರುವ ಸಂಧರ್ಭದಲ್ಲಿ ಈ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತರಾದ ಕುಟುಂಬ ಗುರಿಕಾರ ಶಿವಪ್ಪನವರೇ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು ಎಂದು‌ ತಿಳಿದು ಬಂದಿದೆ. ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಅಗಮಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು