10:18 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ; ಛಾವಣಿಗೆ ಸಂಪೂರ್ಣ ಹಾನಿ

09/05/2024, 10:20

ಕಾರ್ಕಳ(reporterkarnataka.com): ಇಲ್ಲಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ.


ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದೂ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ.
ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿಗೀಡಾಗಿದೆ.
ಸ್ಫೋಟಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು