6:41 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿ ಯಶೋದಾ ಶೆಟ್ಟಿ ಪುನರಾಯ್ಕೆ

26/09/2023, 16:20

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ದ ಮಹಾಸಭೆಯು ಒಕ್ಕೂಟದ ಸಭಾಂಗಣದಲ್ಲಿ ಯಶೋಧ ಶೆಟ್ಟಿ
ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಒಕ್ಕೂಟದ ಕಾರ್ಯದರ್ಶಿಯವರಾದ ವಸಂತಿ ಪಿ. ಸುವರ್ಣ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಒಕ್ಕೂಟಕ್ಕೆ ನೂತನ ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಲಾಗಿದ್ದು,
ಯಶೋಧ ಶೆಟ್ಟಿ ಅಜೆಕಾರ್ ಅವರು ಅಧ್ಯಕ್ಷರಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು .
ಸಾವಿತ್ರಿ ಮನೋಹರ್ ಅವರು ಉಪಾಧ್ಯಕ್ಷರಾಗಿ , ಅರುಂಧತಿ ಆಚಾರ್ ಅವರು ಕಾರ್ಯದರ್ಶಿಯಾಗಿ , ಶೋಭಾ ಪ್ರಸಾದ್ ಜೊತೆ ಕಾರ್ಯದರ್ಶಿಯಾಗಿ, ಶ್ರೀಲತಾ ಶರ್ಮ ಅವರು ಕೋಶಾಧಿಕಾರಿಯಾಗಿ ಆಯ್ಕೆಗೊಂಡರು. ಪ್ರಭಾವತಿ ಈದು, ರತ್ನಾವತಿ ಎನ್ ನಾಯಕ್ , ವಸಂತಿ ಪಿ ಸುವರ್ಣ, ಜಯಂತಿ ಶೆಟ್ಟಿ , ಕಾಂತಿ ಶೆಟ್ಟಿ, ಜ್ಯೋತಿ ಲಕ್ಷ್ಮಿಯವರನ್ನು ಒಕ್ಕೂಟದ ಪದಾಧಿಕಾರಿಗಳಾಗಿ ನೇಮಕ ಮಾಡಲಾಯಿತು. ಒಕ್ಕೂಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರ ನಡೆಸಲ್ಪಡುತ್ತಿದ್ದು ಕೌಟುಂಬಿಕ ಕಲಹಕ್ಕೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಬಹುದಾಗಿದೆ ಹಾಗೂ ಶಿಶುಪಾಲನ ಕೇಂದ್ರದಲ್ಲಿ ಆರು ತಿಂಗಳಿಂದ ಆರು ವರ್ಷದವರೆಗಿನ ಮಕ್ಕಳ 8ಉದ್ಯೋಗಸ್ಥ ಪೋಷಕರು ಮಕ್ಕಳನ್ನು ದಾಖಲು ಮಾಡಬಹುದಾಗಿದೆ ಎಂದು ಅಧ್ಯಕ್ಷರು ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.
ರತ್ನಾವತಿ ನಾಯಕ್ ರವರು ಸ್ವಾಗತಿಸಿದರು ಶ್ರೀಲತಾ ಶರ್ಮ ರವರು ಪ್ರಾರ್ಥನೆ ಗೀತೆ ಹಾಡಿದರು. ಕಾಂತಿ ಶೆಟ್ಟಿ ಅವರು ವಂದಿಸಿದರು ಸಾಂತ್ವನ ಕೇಂದ್ರದ ಸಿಬ್ಬಂದಿಗಳು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು