4:26 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಾರ್ಕಳ: ತಮಿಳುನಾಡು ಮೂಲದ ಲಾರಿ ಚಾಲಕನ ಇರಿದು ಕೊಲೆ; ಇನ್ನೋರ್ವ ಚಾಲಕನ ಮೇಲೆ ಶಂಕೆ

01/02/2023, 09:40

ಕಾರ್ಕಳ(reporterkarnataka.com) ಲಾರಿ ಚಾಲಕನನ್ನು ಆಯುಧದಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಮುಡ್ರಾಲು ಸಮೀಪದ ಗೇರುಬೀಜ ಪ್ಯಾಕ್ಟರಿ ಬಳಿ ನಡೆದಿದೆ.
ತಮಿಳುನಾಡು ಮೂಲದ ಮಣಿ (36) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮುಡ್ರಾಲುನ ಫ್ಯಾಕ್ಟರಿ ಗೆ ಪ್ರತಿವರ್ಷವೂ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಅದರಂತೆ ಜ.30ರಂದು ಸಂಜೆ 4:00 ಗಂಟೆಗೆ ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಸಂಜೆ 5:30 ಗಂಟೆಗೆ ಬಂದಿದ್ದು ತಡವಾದ್ದರಿಂದ ಲಾರಿಯು ಅನ್‌ಲೋಡ್ ಆಗದೇ ಫ್ಯಾಕ್ಟರಿಯ ಬಳಿ ನಿಂತುಕೊಂಡಿತ್ತು. ಲಾರಿಗಳ ಚಾಲಕ ಹಾಗೂ ಬದಲಿ ಚಾಲಕರುಗಳು ಕೂಡಾ ಅಲ್ಲಿಯೇ ಇದ್ದು ರಾತ್ರಿ 8:30 ಗಂಟೆಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರೋರ್ವರಿಗೆ ಫ್ಯಾಕ್ಟರಿಯ ಮೇಲ್ಗಡೆ ಕೆಲಸ ಮಾಡುತ್ತಿರುವಾಗ ಲಾರಿ ನಿಲ್ಲಿಸಿದ ಸ್ಥಳದಿಂದ ಜೋರಾಗಿ ಬೊಬ್ಬೆ ಕೇಳಿಸಿದ್ದು, ಅಲ್ಲಿಗೆ ಹೋಗಿ ನೋಡಿದಾಗ ಲಾರಿಯ ಚಾಲಕ ಮಣಿ (36) ಲಾರಿಯ ಎದುರುಗಡೆ ಆತನ ಕುತ್ತಿಗೆಗೆ ಶಾಲ್ ಬಿಗಿದು ಯಾವುದೋ ಆಯುಧದಿಂದ ಇರಿದು ಕೊಲೆ ಮಾಡಿರುವುದು ಕಂಡುಬಂದಿದೆ.

ಲಾರಿಯ ಇನ್ನೋರ್ವ ಚಾಲಕ ವೀರಬಾಹು ಹಾಗೂ ಮೃತ ಮಣಿ ಗಲಾಟೆ ಮಾಡಿಕೊಳ್ಳುತ್ತಿದ್ದು, ಯಾವುದೋ ಕಾರಣದಿಂದ ಲಾರಿಯ ಇನ್ನೋರ್ವ ಚಾಲಕ ವೀರಬಾಹು ಮಣಿಯನ್ನು ಕೊಲೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು