ಇತ್ತೀಚಿನ ಸುದ್ದಿ
ಕಾರ್ಕಳ: ವಿಷ ಸೇವಿಸಿ ವೃದ್ಧ ಆತ್ಮಹತ್ಯೆ
03/12/2022, 23:23
ಕಾರ್ಕಳ(reporterkarnataka.com): ವಿಷ ಸೇವಿಸಿ ವೃದ್ದರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಲ್ಲಾರಿನಲ್ಲಿ ನಡೆದಿದೆ.
ಕೃಷ್ಣ ಶೆಟ್ಟಿ (65) ವಿಷ ಸೇವಿಸಿದವರು.
ಡಿ.2ರಂದು ತಮ್ಮ ಮನೆಯ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿ, ಅಲ್ಲಿಯ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














