5:11 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ ಹೇಳಿದ್ದೇನು?

16/10/2021, 17:52

ಕಾರ್ಕಳ(reporterkarnataka.com): ಇಬ್ಬರು‌ ಮಕ್ಕಳೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೋಳ ಪದವು ನಿವಾಸಿ ಸವಿತಾ ಪೂಜಾರಿ (36) ಅವರು ತಮ್ಮ ಇಬ್ಬರು ಮಕ್ಕಳಾದ ವಿಷ್ಣು (10) ಹಾಗೂ ಆಶ್ಮಿತಾ ಎಂಬ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ಇವರು ಗಂಡನನ್ನು ಬಿಟ್ಟು ತಾಯಿ ಮನೆಯಾದ ಬೋಳ ಪದವು ಎಂಬಲ್ಲಿ ವಾಸಿಸುತ್ತಿದ್ದರು. ಬೀಡಿ ಕಟ್ಟಿಕೊಂಡು ಜೀವನ ನಡೆಸುತ್ತಿದ್ದರು. ಅಕ್ಟೋಬರ್ 12ರಂದು ಸಂಜೆ 4.30ಕ್ಕೆ ಇಬ್ಬರು ಮಕ್ಕಳೊಂದಿಗೆ ಮುಂಡ್ಕೂರಿನ ನಾನಿಲ್ತಾರಿನಲ್ಲಿರುವ ಅಜ್ಜಿ‌ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು. ಆದರೆ ಬಳಿಕ ಅಲ್ಲಿಗೂ ಹೋಗದೆ ಮನೆಗೂ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಸವಿತಾ ಪೂಜಾರಿ ಒಂದು ವಾರದ ಹಿಂದೆ ತಮ್ಮನಿಗೆ ಪೋನ್ ಮಾಡಿ

ನಾನು ಉಮೇಶ್ ಎಂಬವರನ್ನು ಮದುವೆಯಾಗುತ್ತೇನೆ ಎಂದು ಹೇಳಿದ್ದರಂತೆ. ಅದಕ್ಕೆ ತಮ್ಮ ಒಪ್ಪಿರಲಿಲ್ಲ. ಹೀಗಾಗಿ ಉಮೇಶ್ ಎಂಬವರೊಂದಿಗೆ ಸವಿತಾ ಹೋಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು