1:14 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕಾರ್ಕಳ: ಕೇರಳ ಮೂಲದ ವ್ಯಕ್ತಿಯ ಸುಟ್ಟ ಶವ ಪತ್ತೆ: ಕೊಲೆ ಶಂಕೆ; ಕೆಲಸಗಾರ ನಾಟ್ ರಿಚಬಲ್

21/10/2022, 22:09

ಕಾರ್ಕಳ(reporterkarnataka.com): ಸಾಣೂರು ಶುಂಠಿಗುಡ್ಡೆ ಎಂಬಲ್ಲಿ ವ್ಯಕ್ತಿ ಯೊಬ್ಬರ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಗೋಪಿ (60) ಕೇರಳ ಮೂಲದವರು ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕೊಲೆಗೈದು ಸುಡಲಾಗಿದೆ ಎಂದು ಸಂಶಯ ವ್ಯಕ್ತವಾಗಿದೆ.

ಕಾರ್ಕಳದ ವಿವೇಕಾನಂದ ಶೆಣೈ ಎಂಬುವವರು ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬುವವರ ರಬ್ಬರ್ ಪ್ಲಾಂಟೇಶನ್ ಪಡೆದುಕೊಂಡು ವ್ಯವಹಾರ ಮಾಡಿಕೊಂಡಿದ್ದು ದಿಲೀಪ್, ವಿವೇಕಾನಂದ ಶೆಣೈ ಎಂಬುವವರೊಂದಿಗೆ ಗೇರು ಬೀಜ ಕಾರ್ಖಾನೆಯ ಪಾಲುದಾರನಾಗಿ ಕೆಲಸ ಮಾಡಿಕೊಂಡಿದ್ದರು.

ಪ್ಲಾಂಟೇಷನ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದಿಲೀಪ್ ಅವರಿಗೆ ಗ್ರಾಸ್ ಕಟ್ಟಿಂಗ್ ಮಾಡಲು ಬಂದ ವಸಂತ ಎಂಬಾತ ಕರೆ ಮಾಡಿ ಗೇಟಿನ ಮುಂದೆ ಸ್ವಲ್ಪ ದೂರದಲ್ಲಿ ದಾರಿಯ ಬದಿಯಲ್ಲಿ ಮೃತದೇಹದಂತೆ ಪತ್ತೆಯಾದುದರ ಕುರಿತು ತಿಳಿಸಿದ್ದು ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದಾಗ ಮೃತದೇಹ ಪತ್ತೆಯಾಗಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಗೋಪಿ ಎಂಬಾತನ ಮೃತದೇಹ ಇದಾಗಿದ್ದು ಮೃತದೇಹದ ಹತ್ತಿರ ಸಿಗರ್ ಲೈಟರ್ ಹಾಗೂ ಪೆಟ್ರೋಲ್ ಕ್ಯಾನಿನ ಮುಚ್ಚಳ ಕಂಡುಬಂದಿದೆ. ಇನ್ನೊಬ್ಬ ಕಾರ್ಮಿಕ ಬಾಹುಲೇಯನ್ ಎಂಬಾತನಿಗೆ ಕರೆ ಮಾಡಿದಾಗ ಮೊಬೈಲ್ ಪೋನ್ ಸ್ವಿಚ್ಆಫ್ ಆಗಿದೆ.
ಎರಡು ದಿನಗಳ ಹಿಂದೆ ದಿಲೀಪ್ ರವರೊಂದಿಗೆ ಗೋಪಿ ಮಾತನಾಡಿದ್ದು ಬಳಿಕ ಈ ಕೊಲೆ ನಡೆದಿದೆ .ಜೊತೆಯಲ್ಲಿದ್ದ ಕೆಲಸಗಾರ ಬಾಹುಲೇಯನ್ ಕಾಣೆಯಾಗಿರುವುದರಿಂದ ಗೋಪಿಯನ್ನು ಆತನೇ ಕೊಲೆಗೈದು ಸುಟ್ಟಿದ್ದಾನೆ ಎಂದು ಸಂಶಯಿಸಲಾಗಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು