3:25 AM Monday12 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಕಾರ್ಮಿಕ ಚಳುವಳಿಯ ಮಹಾನ್ ಶಕ್ತಿ ಸಿಐಟಿಯುಗೆ 53ರ ಸಂಭ್ರಮ: ಮಂಗಳೂರಿನಲ್ಲಿ ಸಂಸ್ಥಾಪಕರ ದಿನಾಚರಣೆ

30/05/2023, 20:52

ಮಂಗಳೂರು(reporterkarnataka.com): ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ, ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ ಸಿಐಟಿಯುಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಮಂಗಳವಾರ ನಗರದ ಬೋಳಾರದಲ್ಲಿರುವ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣದ ಮೂಲಕ ಸಿಐಟಿಯು ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣಗೈದ ಸಿಐಟಿಯು ದ. ಕ. ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಅವರು ಮಾತನಾಡಿ, ಸ್ವಾತಂತ್ರ್ಯ ಚಳುವಳಿಯ ಕಾಲಘಟ್ಟದಲ್ಲಿ ಬೆಳೆದು ಬಂದ ಕಾರ್ಮಿಕ ಚಳುವಳಿಯ ಭಾಗವಾಗಿ ಹುಟ್ಟಿಕೊಂಡ ಸಿಐಟಿಯು ಕಳೆದ 53 ವರ್ಷಗಳಲ್ಲಿ ಧೀರೋದಾತ್ತವಾದ ಹೋರಾಟಗಳನ್ನು ನಡೆಸಿ ದೇಶದ ಕಾರ್ಮಿಕ ವರ್ಗವನ್ನು ಒಂದಾಗಿ ಸೇರಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಆಳುವ ವರ್ಗಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಿ ಕಾರ್ಮಿಕ ವರ್ಗದ ಹಿತಾಸಕ್ತಿಯನ್ನು ಕಾಪಾಡಲು ಕಟಿಬದ್ದ ಹೋರಾಡುತ್ತಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, ದೇಶಕ್ಕೆ ಸ್ವಾತಂತ್ರ್ಯ ದೊರೆಯುವಲ್ಲಿ ಕಾರ್ಮಿಕ ವರ್ಗದ ಪಾತ್ರ ಪ್ರಧಾನವಾಗಿದ್ದು,ಇಂದಿಗೂ ದೇಶದ ಅಭಿವೃದ್ಧಿಯಲ್ಲಿ ಹಾಗೂ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವಲ್ಲಿ ದೊಡ್ಡ ಕೊಡುಗೆ ನೀಡಿದೆ.ಇಂತಹ ಕಾರ್ಮಿಕ ವರ್ಗವನ್ನು ವರ್ಗ ಸಂಘರ್ಷದ ದಾರಿಯಲ್ಲಿ ಮುನ್ನಡೆಸಿ ಸಮಾಜದ ಬದಲಾವಣೆಗಾಗಿ ಸಿಐಟಿಯು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ*ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ CITU ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೋಗರು, ಭಾರತಿ ಬೋಳಾರ,ನಾಗೇಶ್ ಕೋಟ್ಯಾನ್, ವಿಧ್ಯಾರ್ಥಿ ನಾಯಕರಾದ ಮಾಧುರಿ ಬೋಳಾರ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲೆಯಾದ್ಯಂತ ಧ್ವಜಾರೋಹಣ ನಡೆಸಬೇಕೆಂಬ ತೀರ್ಮಾನದ ಮೇರೆಗೆ ತೊಕ್ಕೊಟ್ಟು,ಕುತ್ತಾರ್,ಹರೇಕಳ,ಜಪ್ಪಿನಮೋಗರು, ಬಜಾಲ್ ಪಕ್ಕಲಡ್ಕ, ಉರ್ವಸ್ಟೋರ್, ಬಂದರು ಬೈತದಕ್ಕೆ, ಬೆಂಗರೆ, ಕೈಕಂಬ,ಕುಪ್ಪೆಪದವು, ವಾಮಂಜೂರು,ಮೂಡಬಿದ್ರಿ, ಬೆಳ್ತಂಗಡಿ,ಸುಳ್ಯ,ಬಂಟ್ವಾಳ ಮುಂತಾದ ಕಡೆಗಳಲ್ಲಿ ಧ್ವಜಾರೋಹಣ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು