11:59 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ:  ಶಾಸಕ ವೇದವ್ಯಾಸ ಕಾಮತ್ ಸಂತಸ

03/06/2021, 06:33

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. 

ಬಳಿಕ ಮಾತನಾಡಿದ ‌ಶಾಸಕ ಕಾಮತ್, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದರೂ ಕಾಮಗಾರಿ ಸ್ಥಗಿತಗೊಳಿಸದಂತೆ ಎಚ್ಚರ ವಹಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.  ಮಳೆ ನೀರು ಹಾದು ಹೋಗುವ ಚರಂಡಿಯ ಕಾಮಗಾರಿ, ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಕಾರ್ಮಿಕರ ಕೊರತೆಯಿದ್ದರೂ ಕೂಡ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಸ್ಥಳೀಯ ಮನಪಾ ಸದಸ್ಯರೂ ಪಾಲಿಕೆ ಲೆಕ್ಕಪತ್ರ ಸ್ಥಾಯಿ  ಸಮಿತಿಯ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಶಾರದಾ ವಿದ್ಯಾಲಯದ ಪ್ರಮುಖರಾದ ಎಂ. ಬಿ ಪುರಾಣಿಕ್, ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು