10:37 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯ: ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178 ಕನ್ನಡಿಗರು ಇಂದು ತಾಯ್ನಾಡಿಗೆ

24/04/2025, 09:56

ಬೆಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದ್ದು, ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯದಲ್ಲಿ ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178 ಕನ್ನಡಿಗರು ಇಂದು ತಾಯ್ನಾಡಿಗೆ ಮರಳಲಿದ್ದಾರೆ.
ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಕಲ ವ್ಯವಸ್ಥೆಗಳನ್ನು ಕೈಗೊಂಡಿರುವ ಟ್ರಬಲ್ ಶೂಟರ್ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು 178 ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ(ಇಂಡಿಗೋ-6E 9198) ಮೂಲಕ ಇಂದು ಕರೆತರುತ್ತಿದ್ದಾರೆ.
ಇಂದು ಬೆಳಗ್ಗೆ 8.45ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿದ್ದು,ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12ಕ್ಕೆ ಬಂದಿಳಿಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು