10:38 PM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಕಾರ್ಮಿಕ ವರ್ಗವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ; ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ

11/10/2022, 17:44

ಮಂಗಳೂರು(reporter Karnataka gmail.com):ಸಮಾಜದಲ್ಲಿ ಸಂಪತ್ತು ಸ್ರಷ್ಠಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ.ಆದರೆ ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಕಾರ್ಮಿಕ ವರ್ಗವನ್ನು ನಗಣ್ಯ ಮಾಡಿ ಇಡೀ ಆರ್ಥಿಕ ವ್ಯವಸ್ಥೆಯನ್ನು ದೇಶದ ಕಾರ್ಪೊರೇಟ್ ಕಂಪೆನಿಗಳಿಗೆ ಧಾರೆ ಎರೆದು, ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುವ ಮೂಲಕ ಕಾರ್ಮಿಕ ವರ್ಗವನ್ನೇ ಇನ್ನಿಲ್ಲವಾಗಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದೆ. ಎಂದು ಸಿಐಟಿಯು ಕರ್ನಾಟಕ ರಾಜ್ಯಾಧ್ಯಕ್ಷರಾದ ಎಸ್. ವರಲಕ್ಷ್ಮಿ ಹೇಳಿದರು.

ಅವರು ನಗರದ ಬೋಳಾರದಲ್ಲಿರುವ ಕಾಂ.ಬಿ.ಮಾಧವ ವೇದಿಕೆ ಹಾಗೂ ಕಾಂ.ಗಿರಿಯಪ್ಪ ಉಳ್ಳಾಲ ಸಭಾಂಗಣದಲ್ಲಿ ಜರುಗಿದ ಸಿಐಟಿಯು 17ನೇ ದ.ಕ.ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಕಾರ್ಮಿಕ ವರ್ಗವನ್ನು ಪ್ರತಿನಿಧಿಸುವ ಕೇಂದ್ರ ಕಾರ್ಮಿಕ ಸಂಘಟನೆಗಳನ್ನು ಕೈಬಿಟ್ಟು ಭಾರತೀಯ ಕಾರ್ಮಿಕ ಸಮ್ಮೇಳನವನ್ನು ನಡೆಸುವ ಮೂಲಕ ನರೇಂದ್ರ ಮೋದಿ ಸರಕಾರದ ನಿಜವಾದ ಗುಣಲಕ್ಷಣಗಳು ಬಹಿರಂಗಗೊಂಡಿದೆ. ಮಾತೆತ್ತಿದರೆ ಅಭಿವೃದ್ಧಿಯ ಮಂತ್ರ ಜಪಿಸುವ ಕೇಂದ್ರ ಸರಕಾರಕ್ಕೆ ಕಾರ್ಮಿಕ ವರ್ಗವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ ಎಂಬ ಸತ್ಯಾಂಶ ತಿಳಿಯಬೇಕಾಗಿದೆ. ಹೆಜ್ಜೆ ಹೆಜ್ಜೆಗೂ ಕಾರ್ಮಿಕರ ಬದುಕಿಗೆ ಮಾರಕ ಹೊಡೆತ ನೀಡುವ ಕೇಂದ್ರ ಸರಕಾರ ತನ್ನ ಆರ್ಥಿಕ ನೀತಿಗಳನ್ನು ಕೂಡಲೇ ಬದಲಿಸಬೇಕು ಇಲ್ಲದಿದ್ದರೆ ಸರಕಾರವನ್ನೇ ಬದಲಿಸಲು ಕಾರ್ಮಿಕ ವರ್ಗ ಸನ್ನದ್ದವಾಗಬೇಕಾಗಿದೆ ಎಂದರು.
ಸಮ್ಮೇಳನದ ಪ್ರಾರಂಭದಲ್ಲಿ ಧ್ವಜಾರೋಹಣಗೈದ ಸಿಐಟಿಯು ದ.ಕ.ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ, ದುಡಿಯುವ ವರ್ಗದ ಆಶಾಕಿರಣವಾದ ಕೆಂಬಾವುಟವು ಜಗತ್ತಿನ ಕಾರ್ಮಿಕ ವರ್ಗಕ್ಕೆ ಹೊಸ ಚೈತನ್ಯ ಮೂಡಿಸುವ ಹಾಗೂ ಭರವಸೆಯ ಬೆಳಕನ್ನು ನೀಡುವ ಮಹಾಶಕ್ತಿಯಾಗಿದೆ. ದುಡಿಯುವ ವರ್ಗದ ಪರವಾಗಿ ಧ್ರಢವಾಗಿ ನಿಂತು, ಅವರ ಉತ್ತಮ ಬದುಕಿಗಾಗಿ ಸದಾ ಶ್ರಮಿಸುತ್ತಾ ದೇಶದ ಸರ್ವತೋಮುಖ ಬೆಳವಣಿಗೆಗೆ ಕೆಂಬಾವುಟ ಒಂದೇ ದಾರಿ. ದೇಶವನ್ನು ಒಂದಾಗಿಸಲು, ಸೌಹಾರ್ದತೆ ಮೆರೆಯಲು ಭವ್ಯ ಭಾರತದ ನಿರ್ಮಾಣ ಕಾರ್ಮಿಕ ವರ್ಗದಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಜಿಲ್ಲೆಯ ರೈತ ಚಳುವಳಿಯ ನಾಯಕರಾದ ಕೆ.ಯಾದವ ಶೆಟ್ಟಿಯವರು ರೈತ ಕಾರ್ಮಿಕರ ಸಖ್ಯತೆಯ ಪ್ರಾಮುಖ್ಯತೆಯನ್ನು ವಿವರಿಸುತ್ತಾ ಶುಭಕೋರಿದರು.
ವೇದಿಕೆಯಲ್ಲಿ ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ವಸಂತ ಆಚಾರಿ, ಪದ್ಮಾವತಿ ಶೆಟ್ಟಿ, ಕಾರ್ಮಿಕ ಚಳುವಳಿಯ ಹಿರಿಯ ನಾಯಕರಾದ ಯು.ಬಿ.ಲೋಕಯ್ಯ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಸ್ವಾಗತಿಸಿ,ಬಳಿಕ ಕಾರ್ಯಕ್ರಮ ನಿರ್ವಹಿಸಿದರು. ಅಗಲಿದ ಸಂಗಾತಿಗಳಿಗೆ ಶ್ರದ್ಧಾಂಜಲಿ ಅರ್ಪಿಸುವ ನಿರ್ಣಯವನ್ನು ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗರುರವರು ಮಂಡಿಸಿದರು.
ಬಳಿಕ ಜರುಗಿದ ಪ್ರತಿನಿಧಿ ಅಧಿವೇಶನದಲ್ಲಿ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿ ಮುಂಬರುವ ದಿನಗಳಲ್ಲಿ ಬಲಿಷ್ಠವಾದ ಕಾರ್ಮಿಕ ಚಳುವಳಿಯನ್ನು ಕಟ್ಟಲು ಸಮ್ಮೇಳನವು ಪಣ ತೊಟ್ಟಿತು.

ಇತ್ತೀಚಿನ ಸುದ್ದಿ

ಜಾಹೀರಾತು