ಇತ್ತೀಚಿನ ಸುದ್ದಿ
ಕರ್ನಾಟಕ ಬಂದ್: ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ
22/03/2025, 17:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕರ್ನಾಟಕ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.
ಅಂಗಡಿಗಳನ್ನು ಬಂದ್ ಮಾಡುವಂತೆ ಮನವಿ ಮಾಡಲಾಯಿತು. ಈ ಮಧ್ಯೆ ಪೊಲೀಸರು ಹಾಗೂ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬಲವಂತವಾಗಿ ಬಂದ್ ಮಾಡಿಸದಂತೆ ಪೊಲೀಸರು ಸೂಚನೆ ನೀಡಿದರು.