ಇತ್ತೀಚಿನ ಸುದ್ದಿ
ಕರ್ಣಾಟಕ ಬ್ಯಾಂಕ್ ಮಾಜಿ ಎಂಡಿ ಜಯರಾಮ್ ಭಟ್ ನಿಧನ: ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಸಂತಾಪ
09/08/2023, 20:12
ಮಂಗಳೂರು(reporterkarnataka.com): ಕರ್ಣಾಟಕ ಬ್ಯಾಂಕ್ ಮಾಜಿ ಎಂಡಿ ಜಯರಾಮ್ ಭಟ್ ಅವರ ಅಕಾಲಿಕ ನಿಧನಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರೀತಿಯ ರಾಯಭಾರಿಯಂತಿದ್ದ, ಸರಳ ಸಜ್ಜನಿಕೆ, ನಿಷ್ಕಲ್ಮಶ ಹೃದಯದ ಹೃದಯವಂತ ಕರ್ಣಾಟಕ ಬ್ಯಾಂಕ್ ಮಾಜಿ ಎಂಡಿ ಜಯರಾಮ್ ಭಟ್ ಅವರ ಅಕಾಲಿಕ ನಿಧನ ನಮಗೆ ದಿಗ್ಬ್ರಮೆ ಮೂಡಿಸಿದೆ. ಅವರ ನಡೆ, ನುಡಿ ಎಲ್ಲರಿಗೂ ಮಾದರಿ. ಬ್ಯಾಂಕಿಂಗ್ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಕರ್ಣಾಟಕ ಬ್ಯಾಂಕ್ ಚೇರ್ಮನ್ ಆಗಿದ್ದಾಗ ಅವರು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಆರ್ಥಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಸಾಧಾರಣ. ಇವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರಿಗೆ ದೇವರು ಸದ್ಗತಿ ಕರುಣಿಸಲಿ ಮತ್ತು ದುಃಖತಪ್ತ ಕುಟುಂಬ ಸದಸ್ಯರಿಗೆ ನೋವು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಈ ಮೂಲಕ ಪ್ರಾರ್ಥಿಸುತ್ತೇನೆ ಎಂದು ಪದ್ಮರಾಜ್ ಹೇಳಿದ್ದಾರೆ.