4:34 PM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

21/04/2025, 22:10

ಹಾವೇರಿ(reporterkarnataka.com): ಹಾವೇರಿಯಲ್ಲಿಂದು ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಯಿತು.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಒಂದೇ ಒಂದು ಹೊಸ ಯೋಜನೆ ಜಾರಿಗೆ ತರಲಿಲ್ಲ, ಒಂದೇ ಒಂದು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿಲ್ಲ, ಶೋಷಿತರ ಹಣ ಅನ್ಯ ಕಾರ್ಯಗಳಿಗೆ ಬಳಸಿಕೊಂಡು, ಅಲ್ಪಸಂಖ್ಯಾತರ ಹೆಸರಿನಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಕೇವಲ ಮುಸಲ್ಮಾನರಿಗೆ ಮಾತ್ರ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.



ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್,ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ,ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿ ಕುಮಾರ್,ಮಾಜಿ ಸಚಿವ ಬಿ.ಸಿ. ಪಾಟೀಲ್,ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಶಿವರಾಜ್‌ ಸಜ್ಜನ್‌, ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳೀಕೇರಿ, ಮುಖಂಡರಾದ ಭರತ್ ಬೊಮ್ಮಾಯಿ, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು