ಇತ್ತೀಚಿನ ಸುದ್ದಿ
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಜೂನ್ 20ರಂದು ‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಕಾರ್ಯಕ್ರಮ
18/06/2021, 18:17
ಮಂಗಳೂರು(reporterkarnataka news): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ದಿಗ್ಗಜರಾದ ದಿವಂಗತ ಇಬ್ರಾಹಿಂ ತಣ್ಣೀರುಬಾವಿ ಅವರ ನೆನಪಿಗಾಗಿ ‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಲೈವ್ ಕಾರ್ಯಕ್ರಮವನ್ನು ಅಕಾಡೆಮಿಯ ಯೂಟ್ಯೂಬ್ ಮತ್ತು ಫೇಸ್ ಬುಕ್ ಚಾನೆಲ್ ಮುಖಾಂತರ ಜೂನ್ 20ರಂದು ರಾತ್ರಿ 7 ಗಂಟೆಯಿಂದ 10 ಗಂಟೆಯವರೆಗೆ ಪ್ರಸಾರ ಮಾಡಲಿದೆ.
ಬ್ಯಾರಿ ಭಾಷೆಯ ಪ್ರಸಿದ್ದ ಗಾಯಕರಾದ ಅನಿತಾ ಡಿಸೋಜಾ, ಮುಹಮ್ಮದ್ ಇಕ್ಬಾಲ್, ಹುಸೈನ್ ಕಾಟಿಪಳ್ಳ, ಅಶ್ರಫ್ ಅಪೋಲೊ, ಶರೀಫ್ ಪರ್ಲಿಯಾ, ಮತ್ತು ಫೈಝ್ ಕಾಟಿಪಳ್ಳ ಇವರು ಭಾಗವಹಿಸಲಿದ್ದಾರೆ.
ಲಾಕ್ ಡೌನ್ ಆದ ಹಿನ್ನಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಗೀತ ಪ್ರಿಯರು ಬಯಸುತ್ತಿದ್ದು, ಈ ಬಗ್ಗೆ ನಿರಂತರವಾಗಿ ಬೇಡಿಕೆಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ. ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಪ್ರತಿಯೊಬ್ಬರು ಈ ಕಾರ್ಯಕ್ರಮವನ್ನು ಮನೆಯಲ್ಲಿ ಕುಳಿತು ವೀಕ್ಷಿಸಬೇಕಾಗಿ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.