10:29 PM Monday30 - June 2025
ಬ್ರೇಕಿಂಗ್ ನ್ಯೂಸ್
ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ

30/06/2025, 22:23

ಮೈಸೂರು(reporterkarnataka.com): ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.


ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ:*
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.

*ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು:*
ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು