7:03 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Karnataka CM | ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ ಸಿದ್ದರಾಮಯ್ಯ

18/04/2025, 19:24

ಬೆಂಗಳೂರು(reporterkarnataka.com):ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.



ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.
12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು.
ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು ವಿವರಿಸಿದರು.
ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದು ಅವರು ನುಡಿದರು.
ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ IAS ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು.
ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.

*ಸಂವಿಧಾನ ವಿರೋಧಿಗಳನ್ನು ದೂರ ಇಡಿ:*
ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು