3:32 AM Thursday19 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

Karnataka CM | ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

14/04/2025, 16:29

*ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿ.ಎಂ ಸಿದ್ದರಾಮಯ್ಯ*

*ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಅಪಪ್ರಚಾರ ಮಾಡುತ್ತಿದ್ದಾರೆ: ಸಿಎಂ*

*8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ: ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ: ಸಿಎಂ*

ಬೆಂಗಳೂರು(reporterkarnataka.com):
ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಡಾ. ಅಂಬೇಡ್ಕರ್ ಅವರೇ ಬರೆದಿದ್ದಾರೆ.
ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.


ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು ಮೊದಲಿಗೆ ವಿರೋಧಿಸಿದ್ದು ಇವರೇ. ಸಂವಿಧಾನದ ಜಾರಿಯನ್ನು ವಿರೋಧಿಸಿದ್ದವರೇ ಈ ಮನುವಾದಿಗಳು ಎಂದು ಟೀಕಿಸಿದರು.
ಭಾಷಣದ ಇತರೆ ಹೈಲೈಟ್ಸ್ ಗಳು…

*ಸಂವಿಧಾನ ಜಾರಿ ಆದ 75 ವರ್ಷಗಳ ಹಿಂದೆಯೇ ವೈರುದ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಅಂಬೇಡ್ಕರ್ ಹೇಳಿದ್ದರು.

*ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ಅಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ, ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ.

*ಅಂಬೇಡ್ಕರ್ ಇಲ್ಲದೇ ಹೋಗಿದ್ದರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ.

*ಬಜೆಟ್ ಗಾತ್ರ ಹೆಚ್ಚಾದಂತೆ scp/ tsp ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತು‌. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಈ ಬಾರಿ 42018 ಕೋಟಿ ರೂಪಯಿಯನ್ನು ನಾವು ತೆಗೆದಿಟ್ಟಿದ್ದೀವಿ.

*8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ.

*ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ*

*ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ*

*ಬಾಬಾ ಸಾಹೇಬ್ ಒಬ್ಬ ವ್ಯಕ್ತಿ ಇಡೀ ದೇಶದ ಶಿಕ್ಷಣ ವಂಚಿತ ನೂರಾರು ಜಾತಿ ಸಮುದಾಯಗಳಿಗೆ ಶಿಕ್ಷಣ ಸಿಗಲು ಕಾರಣಕರ್ತರಾದರು*
*ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು, ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಬರೀ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.

*ಬಹುತ್ವದ ದೇಶ ನಿರ್ಮಾಣಕ್ಕೆ, ಬ್ರಾತೃತ್ವದ ಸಮಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ*

*ಸರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ*

ಮೊದಲಿಗೆ ವಿಧಾನಸೌಧದ ಎದುರಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.

ಇಂದಿನಿಂದ 32 ಜಿಲ್ಲೆಗಳಲ್ಲಿ ಒಟ್ಟು 33 ಡಿಸಿಆರ್ ಇ ಪೊಲೀಸ್ ಠಾಣೆಗಳು ಕಾರ್ಯಾರಂಭ ಮಾಡಲಿವೆ. ಸಾಂಕೇತಿಕವಾಗಿ ಒಂದು ಕೇಂದ್ರ ಡಿಸಿಆರ್ ಇ ಠಾಣೆಯನ್ನು ಉದ್ಘಾಟಿಸಿದ್ದೇನೆ ಎಂದು ಸಿಎಂ ಇದೇ ಸಂರ್ಭದಲ್ಲಿ ಘೋಷಿಸಿದರು. (ಬೆಂಗಳೂರಿನಲ್ಲಿ ಎರಡು ಠಾಣೆ)

ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು