9:49 PM Saturday28 - June 2025
ಬ್ರೇಕಿಂಗ್ ನ್ಯೂಸ್
Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ… ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು;…

ಇತ್ತೀಚಿನ ಸುದ್ದಿ

Karnataka CM | ಆರೆಸ್ಸೆಸ್ಸಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

28/06/2025, 20:53

ಬೆಂಗಳೂರು(reporterkarnataka.com): ಆರೆಸ್ಸೆಸ್ಸಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೆಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.
ಆರ್.ಎಸ್.ಎಸ್ ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಹೇಳಿಕೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಆರ್.ಎಸ್.ಎಸ್ ಅವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಂವಿಧಾನ ಬದಲಾವಣೆಯಾಗಬೇಕು ಹಾಗೂ ಮನುಸ್ಮೃತಿ ಜಾರಿಯಾಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ ಇನ್ನೇನು ಹೇಳಲು ಸಾಧ್ಯ. ಸಂವಿಧಾನ ಶಾಸನ ಸಭೆಯಲ್ಲಿ ಚರ್ಚೆಯಾಗಿ ರಚನೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದರ ಅಧ್ಯಕ್ಷರಾಗಿ ಸಂವಿಧಾನ ರಚಿಸಿದ್ದಾರೆ. ಜಾತ್ಯತೀತ ಮತ್ತು ಸಮಾಜವಾದ ಎಂಬ ಪದಗಳನ್ನು ನಂತರ ಸೇರಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸಂಸತ್ತಿನಲ್ಲಿ ಇದು ಚರ್ಚೆಯಾಗಿ ಸoವಿಧಾನ ತಿದ್ದುಪಡಿ ಮಾಡಲಾಗಿದೆ. ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ ಎಂದರು.

*ಹುಲಿಗಳ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮ*
ಹುಲಿಗಳ ಸಾವಿನ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು