4:52 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ ಸಚಿವರಿಗೆ ಮನವರಿಕೆ ಮಾಡಿದ ರಾಜ್ಯ ಬಿಜೆಪಿ ಸಂಸದರ ನಿಯೋಗ

07/08/2025, 21:36

*ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರದ ಕ್ಯಾತೆ ದುರುದ್ದೇಶದಿಂದ ಕೂಡಿದೆ: ಬಸವರಾಜ ಬೊಮ್ಮಾಯಿ*

ನವದೆಹಲಿ(reporterkarnataka.com): ಕೃಷ್ಣಾ ಮೇಲ್ಮಂಡೆ ಯೋಜನೆ 2ನೇ ಹಂತದಲ್ಲಿ ಆಲಮಟ್ಟಿ ಆಣೆಕಟ್ಟೆಯ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್ ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರ ಅನವಶ್ಯಕ ಕ್ಯಾತೆ ತೆಗೆಯುತ್ತಿರುವುದು ಖಂಡನೀಯ. ಕೃಷ್ಣಾ ನ್ಯಾಯಾಧೀಕರಣದ ಆದೇಶದಂತೆ ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಳ ಮಾಡುವುದು ಕರ್ನಾಟಕದ ಹಕ್ಕು ಎಂದು ರಾಜ್ಯದ ಬಿಜೆಪಿ ಸಂಸದರ ನಿಯೋಗ ಕೇಂದ್ರ ಜಲ ಶಕ್ತಿ ಸಚಿವ ಸಿ.ಆ‌ರ್. ಪಾಟೀಲ ಅವರಿಗೆ ಮನವರಿಕೆ ಮಾಡಿದೆ.
ಕೇಂದ್ರ ಸಚಿವರ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮಹಾರಾಷದ ಸಂಸದರು ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಆಲಮಟ್ಟಿ ಡ್ಯಾಮ್ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರೊಂದಿಗೆ ಬಿಜೆಪಿ ಸಂಸದರ ನಿಯೋಗ ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಹಾಗೂ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ಆಲಮಟ್ಟಿ ಆಣೆಕಟ್ಟೆ ಎತ್ತರ ಹೆಚ್ಚಳ ಮಾಡಲು ಮಹಾರಾಷ್ಟ್ರ ಕ್ಯಾತೆ ತೆಗೆಯುತ್ತಿರುವುದು ಖಂಡನೀಯ ಎಂದು ತಿಳಿಸಿದ್ದೇವೆ ಎಂದರು.
ಕೃಷ್ಣಾ ನ್ಯಾಯಾಧೀಕರಣ 2 ರಲ್ಲಿ ಆಲಮಟ್ಟಿ ಡ್ಯಾಮ್ ಎತ್ತರವನ್ನು 524 ಮೀಟರ್‌ಗೆ ಹೆಚ್ಚಳ ಮಾಡಲು ಒಪ್ಪಿಗೆ ಕೊಟ್ಟಿದೆ. ಇದಕ್ಕೂ ಪೂರ್ವದಲ್ಲಿ ಕೇಂದ್ರ ಹಾಗೂ ಮೂರು ರಾಜ್ಯಗಳ ತಂಡದಿಂದ ಜಂಟಿ ಸಮೀಕ್ಷೆ ಮಾಡಿ, ಹೈಡಾಲಜಿಕಲ್ ಸ್ಟಡಿ ಮಾಡಿ ಡ್ಯಾಮ್‌ನಿಂದ ಪ್ರವಾಹ ಉಂಟಾಗುವುದಿಲ್ಲ ಎಂದು ಹೇಳಿದ್ದಾರೆ. 2005 ರಲ್ಲಿ ಪ್ರವಾಹ ಆದಾಗ ಕೇಂದ್ರ ಜಲ ಆಯೋಗವೂ ಕೂಡ ಸಾಂಗ್ಲಿ ಮತ್ತು ಕೊಲ್ಲಾಪುರದಲ್ಲಿ ಡ್ಯಾಮ್‌ನಿಂದ ಪ್ರವಾಹ ಆಗುವುದಿಲ್ಲ ಎಂದು ಹೇಳಿದೆ. ಹೀಗಾಗಿ ಮಹಾರಾಷ್ಟ್ರ ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಳ ಮಾಡಲು ಕ್ಯಾತೆ ತೆಗೆದಿರುವುದು ಸರಿಯಲ್ಲ ಮತ್ತು ದುರುದ್ದೇಶದಿಂದ ಕೂಡಿದೆ ಎಂದರು.
ನ್ಯಾಯ ಮಂಡಳಿ ಆದೇಶ ಸುಪ್ರೀಂ ಕೋರ್ಟ್ ಡಿಕ್ರಿ ಇದ್ದ ಹಾಗೆ ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಳ ಮಾಡುವುದು ನಮ್ಮ ಹಕ್ಕು. ನಮ್ಮ ಹಕ್ಕನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿ ಕೊಟ್ಟಿದ್ದೇವೆ. ಅವರು ಗೆಜೆಟ್ ನೋಟಿಫಿಕೇಶನ್ ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯದ ಆದೇಶದಂತೆ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮೀರಿ ಏನೂ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಆದಷ್ಟು ಬೇಗನೇ ವಿಚಾರಣೆಗೆ ಬರುವಂತೆ ಮಾಡಿ ಗೆಜೆಟ್ ನೋಟಿಫೀಕೇಶನ್ ಹೊರಡಿಸುವಂತೆ ಮಾಡಿಸಲು ತಮ್ಮ ಎಲ್ಲ ಶಕ್ತಿ ಉಪಯೋಗಿಸಬೇಕು ಎಂದು ಹೇಳಿದರು.

ಆಲಮಟ್ಟಿ ವಿವಾದದ ಕುರಿತು ಕೇಳಿದ ಪ್ರಶ್ನೆಗೆ ಪತಿಕ್ರಿಯಿಸಿದ ಅವರು, ಅಂತಾರಾಜ್ಯ ಜಲ ವಿವಾದ ಕಾಯ್ದೆ ಸಷ್ಟವಾಗಿದೆ. ಸೆಕ್ಸೆನ್ 3 ಪ್ರಕಾರ ದೂರು ಕೊಟ್ಟ ಮೇಲೆ ಕೇಂದ್ರ ಸರ್ಕಾರ ನ್ಯಾಯ ಮಂಡಳಿ ರಚನೆ ಮಾಡಿ, ನ್ಯಾಯ ಮಂಡಳಿ ಎರಡೂ ಕಡೆ ವಿಚಾರಣೆ ನಡೆಸಿ ಆದೇಶ ಹೊರಡಿಸಿದರೆ ಅದು ಸುಪ್ರೀಂ ಕೋರ್ಟ್ ಡಿಕ್ರಿ ಇದ್ದ ಹಾಗೆ. ಉದಾಹರಣೆಗೆ ಕಾವೇರಿ ವಿಚಾರದಲ್ಲಿ ಸುಮಾರು ಹತ್ತು ಹನ್ನೆರಡು ವರ್ಷಗಳ ನಂತರ ಸುಪ್ರೀಂ ಕೋರ್ಟ್ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಹೇಳಿತ್ತು. ಸಂವಿಧಾನದಲ್ಲಿ ಸುಪ್ರೀಂ ಕೋರ್ಟ್‌ಗೆ ಕೆಲವು ಅಧಿಕಾರವಿದೆ. ಅದನ್ನು ಸುಪ್ರೀಂ ಕೋರ್ಟ್ ಬಳಕೆ ಮಾಡುತ್ತದೆ ಎಂದು ಹೇಳಿದರು.
ನಿಯೋಗದಲ್ಲಿ ಬಿಜೆಪಿ ಸಂಸದರಾದ ಗೋವಿಂದ ಕಾರಜೋಳ, ಪಿ.ಸಿ. ಗದ್ದಿಗೌಡರ, ರಮೇಶ ಜಿಗಜಿಣಗಿ ಹಾಗೂ ಕೇಂದ್ರ ಜಲ ಶಕ್ತಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು