3:38 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕಂಪ್ಲಿ ತಾಲೂಕು ಉಪಾಧ್ಯಕ್ಷರಾಗಿ ದೊಡ್ಡ ಬಸವರಾಜ್ ಬಡಗಿ ನೇಮಕ

12/10/2022, 23:34

ಬೆಂಗಳೂರು(reporterkarnataka.com) : ರಾಜ್ಯದ ವಿಸ್ಮಯ ವಾಣಿ ಪತ್ರಿಕೆಯ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ವರದಿಗಾರರು ದೊಡ್ಡ ಬಸವರಾಜ್ ಬಡಗಿ ಅವರನ್ನು “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ” ಸಂಘಟನೆಯ ಬಳ್ಳಾರಿ ಜಿಲ್ಲಾ ಕಂಪ್ಲಿ ತಾಲೂಕಿನ ಉಪಾಧ್ಯಕ್ಷರಾಗಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ನೇಮಿಸಿದ್ದಾರೆ.

ದೊಡ್ಡ ಬಸವರಾಜ್ ಬಡಗಿ ಅವರು ಕಳೆದ
ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಪತ್ರಕರ್ತರಾಗಿ
ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ವಿಸ್ಮಯ ವಾಣಿ ಸೇರಿದಂತೆ ರಾಜ್ಯದ ಹಲವಾರು ಪತ್ರಿಕೆಗಳಿಗೆ ವರದಿಗಳು ಕೊಡುತ್ತಾ ಇದ್ದರು ಮತ್ತು ವಿಸ್ಮಯ ವಾಣಿ ಪತ್ರಿಕೆಯ ವರದಿಗಾರರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ.

ಕಳೆದ ವರ್ಷಗಳಿಂದ ತಮ್ಮದೇ ಸಮಾಜ ಸೇವೆ ಕ್ಷೇತ್ರದಲ್ಲಿ ಮತ್ತು ದಲಿತ ಸಂಘದ ದಲಿತ ಪರ ಗ್ರಾಮದ ಹಳ್ಳಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳ ಸಲುವಾಗಿ ಹೊರಾಟ ಮಾಡಿದ್ದಾರೆ. ಅವರ ಪರಿಣಾಮಕಾರಿ ವರದಿಗಳು ಓದುಗರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ಎಂಟು ತಿಂಗಳ ಹಿಂದೆ “ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘ” ವನ್ನು ಸ್ಥಾಪಿಸಿ ಸಾಕಷ್ಟು ಜನಪ್ರಿಯ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ಮನಮುಟ್ಟುವಲ್ಲಿ ಸಫಲರಾಗಿದ್ದಾರೆ.

ಇವರ ಅಮೂಲಾಗ್ರ ಸಂಘಟನಾತ್ಮಕ ಸೇವೆಯನ್ನು ಗಮನಿಸಿ “ಕರ್ನಾಟಕ ವರ್ಕಿಂಗ್ ಜರ್ನಲಿಸ್ಟ್ ವಾಯ್ಸ್ ಸಂಘಟನೆಯ ಕಂಪ್ಲಿ ತಾಲೂಕಿನ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನರವರು ನೇಮಕಮಾಡಿದ್ದಾರೆ. ತಮ್ಮ ಅವಧಿಯಲ್ಲಿ ಪತ್ರಕರ್ತರರನ್ನು ಸಂಘಟಿಸುವುದರ ಜೊತೆಯಲ್ಲಿ ಅವರ ಮೂಲಭೂತ ಹಕ್ಕುಗಳು ಹಾಗೂ ಅವರು ಕಾರ್ಯ ನಿರ್ವಹಿಸುವಾಗ ಎದುರಾಗುವ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು