2:43 PM Sunday22 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆಯು ಲಾಭಾಂಶ 108 ಕೋಟಿ ಸರ್ಕಾರಕ್ಕೆ ಹಸ್ತಾಂತರ

17/12/2024, 22:24

ಬೆಂಗಳೂರು(reporterkarnataka.com): ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಮಂಗಳವಾರ ಇಲ್ಲಿ ಹಸ್ತಾಂತರಿಸಿದರು.
ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು.
ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು.
ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು. ನಂತರ ಮಾತನಾಡಿದ ಮುಖ್ಯಮಂತ್ರಿಯವರು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಚಿವ ಎಂ. ಬಿ. ಪಾಟೀಲ್ ಮಾತನಾಡಿ, ‘ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೆಎಸ್ಡಿಎಲ್ ಕಾರ್ಖಾನೆಯು ಉನ್ನತಿ ಕಾಣುತ್ತಿದೆ. ಈ ಲಾಭವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಸಲು ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಹೊಸಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.
ಸಾರ್ವಜನಿಕ ಉದ್ದಿಮೆಗಳು ತಮ್ಮ ಲಾಭಾಂಶದಲ್ಲಿ ಶೇ.30ರಷ್ಟನ್ನು ಸರಕಾರಕ್ಕೆ ಕೊಡಬೇಕಾದ್ದು,ನಿಯಮವಾಗಿದೆ. ಇದಕ್ಕೆ ತಕ್ಕಂತೆ ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷ ನಾಡಗೌಡ ವಿವರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ.ಎಂ.ಪ್ರಶಾಂತ್, ಕಾರ್ಖಾನೆ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್.ರವೀಶ, ಗಂಗಪ್ಪ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು