ಇತ್ತೀಚಿನ ಸುದ್ದಿ
ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ
06/03/2026, 11:06
ಬೆಂಗಳೂರು(reporterkarnataka.com):
* ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ
• ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ
• ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ₹10 ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ – ಕೀಟ ನಿಯಂತ್ರಣ ಕ್ರಮಗಳ ಜಾರಿ
• ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ರೂ.64 ಕೋಟಿ ವೆಚ್ಚದಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ
• ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ













