4:40 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌: ವಿಧೇಯಕಕ್ಕೆ ರಾಜ್ಯಪಾಲರ ಸಹಿ

17/04/2026, 09:56

ಬೆಂಗಳೂರು(repoeterkarnataka.com): ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಹಿ ಹಾಕಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ರಾಜ್ಯ ಚುನಾವಣಾ ಆಯೋಗ ಮತಪತ್ರಗಳನ್ನು ಬಳಸಲಿದೆ. ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಚುನಾವಣೆಗಳಿಗೆ ಇದು ಅನ್ವಯವಾಗಲಿದೆ. ಚುನಾವಣೆಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಮತದಾನದ ಗುಪ್ತತೆಯನ್ನು ಕಾಯ್ದುಕೊಳ್ಳಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು