10:14 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ‘ದೀಪಾವಳಿ ಪರ್ವದ ಐಸಿರ’ ಕಾರ್ಯಕ್ರಮ

21/10/2025, 19:36

ಮಂಗಳೂರು:(reporterkarnataka.com):ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಯೋಗದಲ್ಲಿ ದೀಪಾವಳಿ ಪರ್ಬದ ಐಸಿರ, ಪಾತೆರಕತೆ, ಕಬಿಗೋಷ್ಠಿ, ನೃತ್ಯ ಸಂಭ್ರಮ, ಪದರಂಗಿತ ಕಾರ್ಯಕ್ರಮ ಬಲ್ಮಠ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿತು.


ಕಾರ್ಯಕ್ರಮವನ್ನು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ರೈ ಶ್ರೇಣಿ ಉದ್ಘಾಟಿಸಿ ಮಾತನಾಡಿ, ತುಳುನಾಡಿನ ಬೆಳಕಿನ ಹಬ್ಬ ಪ್ರಕೃತಿ ಆರಾಧನೆಯನ್ನು ಒಳಗೊಂಡಿದೆ. ಇಂದಿನ ಮಕ್ಕಳಿಗೆ ನಮ್ಮ ಆಚರಣೆಗಳ ಬಗ್ಗೆ ಅರಿವು ಮೂಡಿಸುವ ಶಿಕ್ಷಣ ನೀಡಬೇಕು. ಹಂಡೆ ತುಂಬಿಸಿ, ಅಲಂಕರಿಸಿ, ಎಣ್ಣೆ ಹಚ್ಚಿ ಸ್ನಾನ ಮಾಡುವ ಮೂಲಕ ಆರಂಭಗೊಳ್ಳುವ ಹಬ್ಬದ ಗೋಪೂಜೆ ಸೇರಿದಂತೆ ಬಲಿಯೇಂದ್ರನನ್ನು ಕರೆಯುವ ವಿಶೇಷ ಆಚರಣೆಗಳ‌ ಮೂಲಕ ತನ್ನದೇ ಪ್ರಾಮುಖ್ಯೆ ಪಡೆದುಕೊಂಡಿದೆ ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಧರ್ಮಗಳು ಹಿಂದಿನಂತೆ ಒಟ್ಟಾಗಿ ಇರಬೇಕು
ಹಬ್ಬಗಳು ಪ್ರಕೃತಿ ಯ ನೆಲೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಬೆಸೆದಿರುತ್ತದೆ. ಹಬ್ಬಗಳು ಎಂದರೆ ಎಲ್ಲರನ್ನೂ ಒಟ್ಟುಗೂಡಿಸುವುದಾಗಿದೆ ಎಂದರು.

ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ ಬಾಳ ಗೌರವ ಉಪಸ್ಥಿತಿ ವಹಿಸಿದ್ದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಬೂಬ ಪೂಜಾರಿ, ಉದ್ಯಾವರ ನಾಗೇಶ್ ಕುಮಾರ್, ಜಯಶ್ರೀ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ನಡೆದ ಕವಿಗೋಷ್ಠಿಯಲ್ಲಿ ಅನಿತಾ ಪಿಂಟೋ ಕೊಂಕಣಿ, ಸೌಮ್ಯ ಪ್ರವೀಣ್ ಕನ್ನಡ, ಸುಲೋಚನಾ ನವೀನ್ ತುಳು ಹಾಗೂ ಶಮೀಮ್ ಕುಟ್ಟಿಕಳ ಬ್ಯಾರಿ ಭಾಷೆಗಳಲ್ಲಿ ಕವನ ವಾಚಿಸಿದರು.
ವಿದ್ಯಾರ್ಥಿನಿ ಕೃಪಾಶ್ರೀ ನಿರೂಪಿಸಿ, ಶ್ರೇಯಾ ಸ್ವಾಗತಿಸಿ, ಪೂಜಾ ವಂದಿಸಿದರು.

ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ಸಮೂಹ ಗಾಯನ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು