4:55 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಕರ್ನಾಟಕದ ದುಃಸ್ಥಿತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮೂಲ ಕಾರಣ: ಕುಮಾರಸ್ವಾಮಿ ಆರೋಪ

27/03/2022, 21:49

ಕೋಲಾರ(reporterkarnataka.com):
ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದರು.

ಕೋಲಾರದಲ್ಲಿಂದು ಮಾಧ್ಯಮಗಳ ಜತೆ ಮಾತುನಾಡುತ್ತಾ ಪ್ರತಿಪಕ್ಷ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು; “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ ಒಂದು ಧರ್ಮದ ಜನರಿಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ, ಹಿಜಾಬ್‌ ಕೇಸರಿ ಶಾಲು ಅಂತ ಹೇಳಿ ಶಾಲೆ ಕಾಲೇಜುಗಳಲ್ಲಿ ಸಂಘರ್ಷ ಉಂಟು ಮಾಡಲಾಯಿತು. ಇದೆಲ್ಲಕ್ಕೂ ಕಾರಣ ಆ ಮಹಾನುಭಾವವರೇ (ಸಿದ್ದರಾಮಯ್ಯ) ಕಾರಣ ಎಂದು ದೂರಿದರು.

2018ರಲ್ಲಿ ರಚನೆಯಾದ ಮೈತ್ರಿ ಸರಕಾರದ ಪತನಕ್ಕೆ ಕಾರಣರಾದ ಸಿದ್ದರಾಮಯ್ಯ ಬಿಜೆಪಿ ಸರಕಾರ ಬರಲು ಸಹಕಾರ ನೀಡಿದರು ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ರಾಜ್ಯದ ಹಿತದೃಷ್ಟಿಯಿಂದ ನಮಗೆ ಇಷ್ಟವಿಲ್ಲದಿದ್ದರೂ ಕಾಂಗ್ರೆಸ್ ಜತೆ ಸರಕಾರ ಮಾಡಲು ಒಪ್ಪಿಕೊಂಡೆವು. ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ನಾವು ಅವರ ಜತೆ ಕೈಜೋಡಿಸಿದೆವು. 2004ರಲ್ಲೂ ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೆವು. ಆಗ ನಮ್ಮನ್ನು ಅಪಮಾನಿಸಿ ಚಿತ್ರಹಿಂಸೆ ನೀಡಿದರು. ಆಗ ಅನಿವಾರ್ಯವಾಗಿ ನಾವು ಬೇರೆ ತೀರ್ಮಾನಗಳನ್ನು ಮಾಡಬೇಕಾಯಿತು. ಅದಕ್ಕೂ ಸಿದ್ದರಾಮಯ್ಯನವರೇ ಮೂಲ ಕಾರಣ ಎಂದು ಅವರು ಹೇಳಿದರು.

2018ರ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪಕ್ಷವೂ ಬಿಜೆಪಿಯ ಬೀ ಟೀಂ ಎಂದು ಅಪಪ್ರಚಾರ ಮಾಡಿದರು. ಹೀಗಾಗಿ ಬಿಜೆಪಿ 105 ಕ್ಷೇತ್ರಗಳಲ್ಲಿ ಗೆದ್ದಿತು. ಇಲ್ಲವಾಗಿದ್ದಿದ್ದರೆ ಅವರು 75 ಸ್ಥಾನಗಳ ಒಳಗೇ ಇರುತ್ತಿದ್ದರು. ಈಗ ಅವರು ಇದೇ ಮಹಾನುಭಾವರ ಸಹಕಾರದಿಂದ ಅಧಿಕಾರಕ್ಕೆ ಬಂದು ರಾಜ್ಯದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಅದಕ್ಕೆ ಮೂಲ ಕಾರಣ ಇವರೇ ಅಲ್ಲವೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು. ಈಗ ಜೆಡಿಎಸ್, ಬಿಜೆಪಿಯೊಂದಿಗೆ ಅಡ್ಜಸ್ಟಮೆಂಟ್ ಮಾಡಿಕೊಂಡಿದೆ ಎಂದು ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ. ಇದೊಂದೇ ಈಗ ಬಾಕಿ ಉಳಿದಿರೋದು. ಅವರು ಬಿಜೆಪಿ ಜತೆ ಏನೆಲ್ಲ ಒಳ ಸಂಬಂಧ ಹೊಂದಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. 2018ರಲ್ಲಿ ನಡೆದ ಇವರ ಆಟ ಇನ್ನು ಮುಂದೆ ನಡೆಯಲ್ಲ. ಅವರ ತಲೆಯಲ್ಲಿ ಸರಕಿಲ್ಲ, ಅದಕ್ಕೆ ಜೆಡಿಎಸ್ ಜಪ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಛೇಡಿಸಿದರು.

ರಾಜ್ಯದಲ್ಲಿ ಜನರು ಶಾಂತಿಯುತವಾಗಿ ಬಾಳ್ವೆ ಮಾಡುವ, ನೆಮ್ಮದಿಯ ಜೀವನ ನಡೆಸುವುದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಬೇಕಿಲ್ಲ. ಅವರಿಗೆ ಬೇಕಿರುವುದು ಕೇವಲ ಅಧಿಕಾರ ಮಾತ್ರ. ಅಧಿಕಾರಕ್ಕಾಗಿ ಅವರು ಏನನ್ನು ಮಾಡಲಿಕ್ಕೂ  ಹೇಸುವುದಿಲ್ಲ. ರಾಜ್ಯದ ಭಾವೈಕ್ಯತೆಯನ್ನು ಎರಡೂ ಪಕ್ಷಗಳು ಹಾಳು ಮಾಡುತ್ತಿವೆ. ಧರ್ಮದ ಧರ್ಮದ ನಡುವೆ ಸಂಘರ್ಷ ಉಂಟು ಮಾಡಿ ಶಾಂತಿ ಹಾಳು ಮಾಡುವುದೇ ಇವರ ಉದ್ದೇಶ. ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು