5:25 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡ: ಕೊಡಗಿನ ಮರದಾಳು ಯಶಿಕ ಆಯ್ಕೆ

07/05/2022, 07:37

ಮಡಿಕೇರಿ(reporterkarnataka.com): ಮಧ್ಯಪ್ರದೇಶದ ಭೂಪಾಲ್ ನಲ್ಲಿ ಆರಂಭಗೊಂಡಿರುವ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡವನ್ನು ಕೊಡಗಿನ ಮರದಾಳು ಯಶಿಕ ಪ್ರತಿನಿಧಿಸುತ್ತಿದ್ದಾರೆ.

8ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗಲೇ ಯಶಿಕ ಮೊದಲ ಪಂದ್ಯವನ್ನು ಜಾರ್ಖಂಡ್ ನ ಕರಾಚಿಯಲ್ಲಿ ಆಡಿದ್ದರು. ನಂತರದ ದಿನಗಳಲ್ಲಿ ದೆಹಲಿ, ಪಂಜಾಬ್, ಒರಿಸ್ಸಾ, ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಬಾರಿ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದಾರೆ. ಇಲ್ಲಿಯವರೆಗೆ ಸುಮಾರು 63 ಕ್ಕಿಂತ ಅಧಿಕ ಪದಕಗಳನ್ನು ಗೆದ್ದಿದ್ದಾರೆ. ನಾಯಕಿಯಾಗಿಯೂ ಒಂದು ವರ್ಷ ಕಾಲ ಕರ್ನಾಟಕ ತಂಡವನ್ನು ಮುನ್ನಡೆಸಿದ್ದಾರೆ.

2020ರಲ್ಲಿ ಚೆನ್ನೈನಲ್ಲಿ ನಡೆದ ಸೌತ್ಜೋನ್ ಕ್ರೀಡಾಕೂಟ, ಪೊನ್ನಂಪೇಟೆಯಲ್ಲಿ ನಡೆದ ವಿಶ್ವ ವಿದ್ಯಾನಿಲಯ ಮಟ್ಟದ ಸೌತ್ ಜೋನ್ ಪಂದ್ಯಾವಳಿಯಲ್ಲಿ ಇವರು ಪ್ರತಿನಿಧಿಸಿದ್ದ ಜಯ ಸಾಧಿಸಿದೆ. ರಾಜಸ್ಥಾನದಲ್ಲಿ ನಡೆದ ಆಲ್ ಇಂಡಿಯಾ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಯಶಿಕ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಮೈಸೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದು, ತಂಡ ಬೆಳ್ಳಿ ಪದಕ ಪಡೆದುಕೊಂಡಿದೆ. ಈ ಪಂದ್ಯಾವಳಿಯಲ್ಲಿ ಇವರು ದಾಖಲೆಯ 8 ಗೋಲುಗಳನ್ನು ಬಾರಿಸಿ ಯಶಸ್ವೀ ಹಾಕಿಪಟು ಎನಿಸಿಕೊಂಡಿದ್ದಾರೆ.

ಫಾರವರ್ಡ್ ಆಟಗಾರ್ತಿ ಮತ್ತು ಮುಖ್ಯ ಸ್ಟೈಕರ್ ಆಗಿ ಪ್ರತಿನಿಧಿಸಿಯೂ ಯಶಸ್ವಿಯಾಗಿದ್ದಾರೆ. ಇಲ್ಲಿಯವರೆಗೆ ಯಶಿಕ ಒಟ್ಟು 45 ಕ್ಕೂ ಹೆಚ್ಚು ಗೋಲುಗಳನ್ನು ದಾಖಲಿಸಿದ್ದಾರೆ.

ಚೇರಳ ಗ್ರಾಮ (ನೆಲ್ಲಿಹಡ್ಲು) ಚೆಟ್ಟಳ್ಳಿ ನಿವಾಸಿ ಮರದಾಳು ಗೋಪಾಲ (ವಿಠಲ) ಹಾಗೂ ನಾಗರತ್ನ ಅವರ ಪುತ್ರಿ ಮರದಾಳು ಯಶಿಕ ಚೆಟ್ಟಳ್ಳಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡಿದರು. ನಂತರ ಪೊನ್ನಂಪೇಟೆ ಸಾಯಿ ಹಾಕಿ ಕೇಂದ್ರಕ್ಕೆ ಸೇರ್ಪಡೆಯಾಗಿ 8 ರಿಂದ 10 ನೇ ತರಗತಿವರೆಗೆ ಪೂರೈಸಿದರು. ಮೈಸೂರಿನ ಟೆರೇಸ್ಸನ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ಬಿಎ ವಿದ್ಯಾಭ್ಯಾಸದ ಜೊತೆಗೆ ಹಾಕಿ ಪಂದ್ಯಾವಳಿಗೆ ಯಶಿಕ ತಮ್ಮ ಸಮಯವನ್ನು ಮೀಸಲಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು