10:29 PM Wednesday21 - May 2025
ಬ್ರೇಕಿಂಗ್ ನ್ಯೂಸ್
Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ ಮೂಡಿಗೆರೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ; ಇಬ್ಬರಿಗೆ ಗಂಭೀರ ಗಾಯ ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ… ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… 1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:… Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ… Karnataka CM | ಬೆಂಗಳೂರಿನಲ್ಲಿ ಮಳೆ ಹಾನಿ: ಮೇ 21ರಂದು ಇಡೀ ದಿನ… GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ… ಫಲಾನುಭವಿಗಳ ನೋಡಲು ಬಿಜೆಪಿ ನಾಯಕರುಗಳೇ ಬನ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಹ್ವಾನ

ಇತ್ತೀಚಿನ ಸುದ್ದಿ

ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತನ್ನಿ: ಯಡಿಯೂರಪ್ಪ ಮುಂದೆ ಮಂಡಿಯೂರಿದ ವರಿಷ್ಠರು 

27/08/2022, 11:13

ಹೊಸದಿಲ್ಲಿ(reporterkarnataka.com):ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಶುಕ್ರವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಟಾಸ್ಕನ್ನು ಬಿಎಸ್ ವೈಗೆ ವರಿಷ್ಠರು ನೀಡಿದ್ದಾರೆ.

ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆಯನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ವಹಿಸಿದ್ದಾರೆ.

ಮೊದಲಿಗೆ ಸಂಜೆ 5 ಗಂಟೆ ವೇಳೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷ ಮಾತುಕತೆ ನಡೆಸಿದ್ದು, ಈ ವೇಳೆ ಉಭಯ ನಾಯಕರು ರಾಜ್ಯದಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತನ್ನಿ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ, ಎಲ್ಲರೂ ಒಗ್ಗೂಡಿ ಮುಂದಡಿಯಿಡಿ ಎಂದು ಮೋದಿ ಅವರು ಹಿರಿಯ ನಾಯಕನಿಗೆ ಸಲಹೆ ನೀಡಿದ್ದಾರೆಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು