7:18 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸ: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯವರಿಗೆ ಸಡಗರದ ಪಲ್ಲಕ್ಕಿ ಉತ್ಸವ

26/11/2024, 11:05

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಮಾಸದ ಅಂಗವಾಗಿ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಪಲ್ಲಕ್ಕಿ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು.


ನಂಜನಗೂಡು ಸ್ಥಳೀಯ ನಯನಜ ಕ್ಷತ್ರಿಯ ಜನಾಂಗದವರು ಅನೂಚಾನವಾಗಿ ಅನಾದಿಕಾಲದಿಂದಲೂ ಕಾರ್ತಿಕ ಮಾಸದ ಕಡೆ ಸೋಮವಾರದಂದು ನಡೆಸಿಕೊಂಡು ಬರುತ್ತಿರುವ ಶ್ರೀಕಂಠೇಶ್ವರ ಸ್ವಾಮಿ ಅವರ ಪಲ್ಲಕ್ಕಿ ಉತ್ಸವ ಇದಾಗಿದೆ. ಪ್ರತಿ ವರ್ಷದಂತೆ ಕಾರ್ತಿಕ ಮಾಸದ ನಾಲ್ಕನೇ ಕಡೆ ಸೋಮವಾರದಂದು ಶ್ರೀ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಅಲಂಕೃತ ಉತ್ಸವ ಮೂರ್ತಿಗಳನ್ನು ಬಣ್ಣ ಬಣ್ಣದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ಹೂವಿನ ಪಲ್ಲಕ್ಕಿಯಲ್ಲಿ ಕೂರಿಸಿ ನುರಿತ ಹಾಗೂ ಹೆಸರಾಂತ ಕಲಾವಿದರ ಮಂಗಳ ವಾದ್ಯಗೋಷ್ಠಿಗಳೊಂದಿಗೆ ಪಟ್ಟಣದ ರಥ ಬೀದಿಗಳಲ್ಲಿ ಶ್ರೀ ಯವರ ಪಲ್ಲಕ್ಕಿ ಉತ್ಸವವನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.
ಉತ್ಸವದ ವೇಳೆ ನಯನಜ ಕ್ಷತ್ರಿಯ ಹಾಗೂ ಮುಡಿಕಟ್ಟೆ ಸಂಘದ ವತಿಯಿಂದ ವಿವಿಧ ಬಗೆಯ ಪಟಾಕಿ ಹಾಗು ಬಾಣ ಬಿರುಸುಗಳನ್ನು ಸಿಡಿಸಲಾಯಿತು. ಇದರಿಂದಾಗಿ ಆಕಾಶದಲ್ಲಿ ಪಟಾಕಿ ಬಾಣ ಬಿರುಸುಗಳ ಬಣ್ಣ, ಬಣ್ಣದ ವಿವಿಧ ಬಗೆಯ ಚಿತ್ತಾರಗಳು ನೋಡುಗರ ಮನಸೂರೆಗೊಂಡವು.
ರಥ ಬೀದಿಯ ಇಕ್ಕೆಲಗಳಲ್ಲಿ ಭಕ್ತರು ಪೂಜಾ ಸಾಮಗ್ರಿಗಳೊಂದಿಗೆ ಬಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಪೂಜೆ ನೀಡುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ಪಟ್ಟಣವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ಶ್ರೀಯವರ ಉತ್ಸವ ಮೂರ್ತಿಗಳನ್ನು ಕಣ್ತುಂಬಿಕೊಂಡರು.
ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ರಾಚಪ್ಪ, ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಸೋಮಣ್ಣ ಮುಖಂಡರುಗಳಾದ ವಿಷಕಂಠ, ಪ್ರಕಾಶ್, ಚಂದ್ರು ಸೇರಿದಂತೆ ಸಮಾಜದ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಮುಡಿಕಟ್ಟೆ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ಹಾಗೂ ಸಮಾಜದ ಮುಖಂಡ ನಾಗೇಶ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು