2:12 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸ: ದಕ್ಷಿಣ ಕಾಶಿ ನಂಜನಗೂಡಿಗೆ ಹರಿದು ಬಂದ ಭಕ್ತ ಸಾಗರ

18/11/2024, 18:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಶುಭ ಸೋಮವಾರದ ಪ್ರಯುಕ್ತ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂತು. ಬೆಳಗಿನ ಜಾವ ಐದು ಗಂಟೆಯಿಂದಲೇ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿವಿಧ ಅಭಿಷೇಕ ಪೂಜೆಗಳನ್ನು ನೆರವೇರಿಸಲಾಯಿತು.


ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಬಂದ ಭಕ್ತರು ಮುಡಿಸೇವೆ ಉರುಳು ಸೇವೆ ತುಲಾಭಾರ ಸೇವೆಗಳನ್ನು ಮುಗಿಸಿ ಸರತಿ ಸಾಲಿನಲ್ಲಿ ಬಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು. ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ದೇವಾಲಯದ ಒಳಗೆ ಪ್ರವೇಶಿಸಲು ಭಕ್ತರು ಗಂಟೆಗಟ್ಟಲೆ ಕಾಯುವ ಮುಖಾಂತರ ಹರಸಾಹಸ ಪಡಬೇಕಾಯಿತು.
ದೇವಾಲಯದ ಒಳಗೆ ಪ್ರವೇಶಿಸಲು ಆಗದ ಸಾವಿರಾರು ಭಕ್ತರು ದೇವಾಲಯದ ಮುಂಭಾಗ ಹೊರ ಆವರಣದಲ್ಲಿಯೇ ಪೂಜೆ ಸಲ್ಲಿಸಿ ದೀಪಾರಥಿಗಳನ್ನು ಬೆಳಗುವ ಮೂಲಕ ಅಲ್ಲಿಂದಲೇ ತಮ್ಮ ಭಕ್ತಿ ಭಾವ ಸಮರ್ಪಿಸಿದರು.
ನಿತ್ಯ ದಾಸೋಹದಂತೆ ದಾನಿ ಒಬ್ಬರು ಬಂದ ಎಲ್ಲಾ ಭಕ್ತರಿಗೆ ಇಂದಿನ ಒಂದು ದಿನದ ದಾಸೋಹದ ಸೇವೆಯನ್ನು ಒದಗಿಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.
ದೇವಾಲಯದ ವತಿಯಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತಾದರೂ ಸರಿಯಾದ ನಿರ್ವಹಣೆ ಇಲ್ಲದೆ ಘರ್ಷಣೆಗೆ ಕಾರಣವಾಗಿ ಮುಚ್ಚಲಾಯಿತು.
ಇದರಿಂದಾಗಿ ದೂರ ದೂರದ ಊರುಗಳಿಂದ ಬಂದ ಕೆಲ ಹಿರಿಯ ನಾಗರಿಕರು ದೇವಸ್ಥಾನದ ಒಳ ಹೋಗಲಾರದೆ ಹಾಗೂ ದೇವರ ದರ್ಶನ ಪಡೆಯಲಾಗದೆ ಹಿಂದಿರುಗಿರುವ ಘಟನೆಗಳು ನಡೆದವು. ಅಲ್ಲದೆ ಭಕ್ತರ ಅನುಕೂಲಕ್ಕಾಗಿ ಹಾಗೂ ಉರುಳು ಸೇವೆಗಾಗಿ ಶಾಮಿಯಾನ ಹಾಕಿದ್ದ ಜಾಗದಲ್ಲಿ ಹಾಗೂ ಹಳ್ಳದ ಕೇರಿಗೆ ಹೋಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಾರುಗಳನ್ನು ನಿಲ್ಲಿಸುವ ಮೂಲಕ ಸಂಚಾರ ಅಡಚಣೆಗೆ ಕಾರಣವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಟ್ಟ ದೇವಾಲಯ ಹಾಗೂ ನಗರಸಭೆ ಆಡಳಿತ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ದೇವಾಲಯಕ್ಕೆ ಭಕ್ತರ ಮಹಾ ಪೂರವೇ ಹರಿದು ಬಂದ ಕಾರಣ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಸಹ ಹರಸಾಹಸ ಪಡಬೇಕಾಯಿತು.
ದೇವಾಲಯದ ಪ್ರಧಾನ ಆಗಮಿಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರು ಮಾತನಾಡಿ ವಿಶೇಷತೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು